ಮಿ 11 ಲೈಟ್ VS ರೆಡ್ಮಿ ನೋಟ್ 10 ಪ್ರೊ: ಭಿನ್ನತೆಗಳೆನು?..ಯಾವುದು ಬೆಸ್ಟ್‌?

24-06-21 12:28 pm       GIZBOT Mantesh   ಡಿಜಿಟಲ್ ಟೆಕ್

ಇತ್ತೀಚಿಗಷ್ಟೆ ಲಾಂಚ್ ಮಾಡಿರುವ ಮಿ 11 ಲೈಟ್ ಸ್ಮಾರ್ಟ್‌ಫೋನ್ ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ.

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಶಿಯೋಮಿಯು ಭಿನ್ನ ಶ್ರೇಣಿಯಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಲಾಂಚ್ ಮಾಡಿರುವ ಮಿ 11 ಲೈಟ್ ಸ್ಮಾರ್ಟ್‌ಫೋನ್ ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನ್ ಕಂಪನಿಯ ರೆಡ್ಮಿ ನೋಟ್ 10 ಪ್ರೊ ಫೋನ್‌ನೊಂದಿಗೆ ಸಾಮ್ಯತೆ ಅನಿಸಿದರೂ, ಕೆಲವು ಭಿನ್ನತೆಗಳು ಇವೆ. ಆದರೆ ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ ಆಯ್ಕೆ?

ಹೌದು, ಶಿಯೋಮಿಯು ಹೊಸದಾಗಿ ಲಾಂಚ್ ಮಾಡಿರುವ ಮಿ 11 ಲೈಟ್‌ ಹಾಗೂ ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ಗಳು ಅಧಿಕ ವೇಗದ ಪ್ರೊಸೆಸರ್‌, ಹೈ ಕ್ಯಾಮೆರಾ ಸೆನ್ಸಾರ್, ಬಿಗ್ ಬ್ಯಾಟರಿ, ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಡಿಸ್‌ಪ್ಲೇನಂತಹ ಆಕರ್ಷಕ ಫೀಚರ್ಸ್‌ಗಳಿಂದ ಅಟ್ರ್ಯಾಕ್ಟ್‌ ಮಾಡಿವೆ. ಅದಾಗ್ಯೂ ಈ ಎರಡು ಫೋನ್‌ಗಳು ಪ್ರೈಸ್‌ಟ್ಯಾಗ್‌ ಹಾಗೂ ಇತರೆ ಕೆಲವು ಫೀಚರ್ಸ್‌ಗಳಿಂದ ಭಿನ್ನವಾಗಿವೆ. ಹಾಗಾದರೇ ಮಿ 11 ಲೈಟ್‌ ಹಾಗೂ ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವುದು ಉತ್ತಮ?..ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.



ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ ಹೇಗಿದೆ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ 3,200× 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಹೊಂದಿದೆ. ಗೊರಿಲ್ಲಾ ಗ್ಲಾಸ್ 6 ರಕ್ಷಣೆ ಇದ್ದು, 90Hz ರೀಫ್ರೇಶ್‌ ರೇಟ್‌ ಪಡೆದಿದೆ. ಹಾಗೆಯೇ HDR10+ ಹಾಗೂ ಡಾಲ್ಬಿ ವಿಷನ್ ಸಪೋರ್ಟ್‌ ಪಡೆದಿದೆ. ಇನ್ನು ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.



ಪ್ರೊಸೆಸರ್‌ ಕಾರ್ಯ ಹೇಗಿದೆ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಅಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಫೋನ್ 6GB RAM+128GB ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಅದೇ ರೀತಿ ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌



ಕ್ವಾಡ್‌ ಕ್ಯಾಮೆರಾ ವಿಶೇಷತೆ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್‌ ಬಲದಲ್ಲಿ ಇದೆ. ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ರೆಡ್ಮಿ ನೋಟ್ 10 ಪ್ರೊ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.



ಬ್ಯಾಟರಿ ಪವರ್ ಮತ್ತು ಇತರೆ ಫೀಚರ್ಸ್‌

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ 4,250mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದರೊಂದಿಗೆ ವೈ-ಫೈ, 4 ಜಿ, ಬ್ಲೂಟೂತ್ ವಿ 5.1, ಎನ್‌ಎಫ್‌ಸಿ, ಜಿಪಿಎಸ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಸಹ ಇದೆ. ಇನ್ನು ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ (IR), USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಹೈ-ರೆಸ್ ಬೆಂಬಲದೊಂದಿಗೆ ನೀವು ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಪಡೆಯುತ್ತೀರಿ.



ಬೆಲೆ ಮತ್ತು ಲಭ್ಯತೆ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ 6GB RAM+128GB ವೇರಿಯಂಟ್ ದರವು 21,999 ರೂ. ಆಗಿದೆ. ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 23,999ರೂ.ಗಳಾಗಿದೆ. ಜಾಜ್‌ ಬ್ಲೂ, ಟಸ್ಕನಿ ಕೋರಲ್ ಮತ್ತು ವಿನೈಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ರೆಡ್‌ಮಿ ನೋಟ್ 10 ಪ್ರೊ 6GB RAM + 64GB ಶೇಖರಣಾ ಮಾದರಿಗೆ 15,999 ರೂ. ಹಾಗೂ 6GB RAM + 128 GB ಸ್ಟೋರೇಜ್‌ ಆಯ್ಕೆಗೆ 16,999 ರೂ ಮತ್ತು 8 GB RAM + 128GB ಶೇಖರಣಾ ರೂಪಾಂತರಕ್ಕೆ 18,999 ರೂ.ಬೆಲೆ ಹೊಂದಿದೆ.

(Kannada Copy of Gizbot Kannada)