ಬ್ರೇಕಿಂಗ್ ನ್ಯೂಸ್
26-06-21 10:42 am GIZBOT Mantesh ಡಿಜಿಟಲ್ ಟೆಕ್
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದದೆ. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಬಜೆಟ್ ದರದಲ್ಲಿ ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿರುವುದು ಹೈಲೈಟ್ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ಗ್ಯಾಲಕ್ಸಿ M42 ಸ್ಮಾರ್ಟ್‌ಫೋನ್ ಸಹ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಎರಡು ಫೋನಿನ ಫೀಚರ್ಸ್‌ನಲ್ಲಿ ಸಾಮ್ಯತೆ ಇದ್ದರೂ ಆದರೆ ಇವೆರಡರಲ್ಲಿ ಭಿನ್ನತೆಗಳಿವೆ. ಖರೀದಿಗೆ ಯಾವುದು ಉತ್ತಮ ಆಯ್ಕೆ?
ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ನೂತನ ಗ್ಯಾಲಕ್ಸಿ M32 ಮತ್ತು ಗ್ಯಾಲಕ್ಸಿ M42 ಸ್ಮಾರ್ಟ್‌ಫೋನ್ಗಳು ಬಜೆಟ್ ಪ್ರೈಸ್ ಟ್ಯಾಗ್ ಹೊಂದಿರುವುದು ಮೊದಲ ಆಕರ್ಷಕ ಅನಿಸಿದೆ. ಹಾಗೆಯೇ ಈ ಎರಡು ಫೋನ್‌ಗಳು ಕ್ವಾಡ್ ಕ್ಯಾಮೆರಾ ರಚನೆ ಪಡೆದಿರುವುದು ಜೊತೆಗೆ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆಯನ್ನು ಹೊಂದಿರುವುದು ಪ್ಲಸ್ ಪಾಯಿಂಟ್ ಆಗಿ ಗುರುತಿಸಿಕೊಂಡಿದೆ. ಪ್ರೈಸ್ ಟ್ಯಾಗ್ ಸೇರಿದಂತೆ ಈ ಎರಡು ಫೋನ್‌ಗಳಲ್ಲಿ ಕೆಲವು ಭಿನ್ನತೆಗಳು ಇವೆ. ಹಾಗಾದರೇ ಈ ಎರಡು ಫೋನ್‌ಗಳಲ್ಲಿ ಖರೀದಿಗೆ ಯಾವುದು ಉತ್ತಮ? ಇವೆರಡು ಫೋನ್‌ಗಳ ಕಂಪ್ಲೀಟ್ ಫೀಚರ್ಸ್ ಮಾಹಿತಿ ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ ಬ್ರೈಟ್‌ನೆಸ್ ಹೊಂದಿದ್ದು, 90Hz ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಸಹ ಬೆಂಬಲಿಸುತ್ತದೆ. ಅದೇ ರೀತಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 84.3% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಪ್ರೊಸೆಸರ್ ಕಾರ್ಯ ಹೇಗೆ
ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಹಾಗೆಯೇ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ.
ಕ್ಯಾಮೆರಾ ಸೆನ್ಸಾರ್
ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಕ್ವಾಡ್-ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಆದಾಗ್ಯೂ, ಬ್ರ್ಯಾಂಡ್ ಪ್ರಸ್ತುತ ಪೆಟ್ಟಿಗೆಯಲ್ಲಿ 15W ಚಾರ್ಜರ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLte, ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 36 ಗಂಟೆಗಳ ಟಾಕ್ ಟೈಮ್, 22 ಗಂಟೆಗಳ ಇಂಟರ್ನೆಟ್ ಬ್ರೌಸಿಂಗ್ ಮತ್ತು 34 ಗಂಟೆಗಳ ವಿಡಿಯೋ ಪ್ಲೇ ಅನ್ನು ನೀಡಲಿದೆ. ಇದು ನಾಕ್ಸ್ ಭದ್ರತೆ ಮತ್ತು ಸ್ಯಾಮ್‌ಸಂಗ್ ಪೇ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಲಿದೆ.
(Kannada Copy of Gizbot Kannada)
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm