ಈ ವರ್ಷ ಭಾರತದಲ್ಲಿ 10,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಲಾಂಚ್‌ ಆದ ಸ್ಮಾರ್ಟ್‌ಫೋನ್‌ಗಳು!

02-07-21 10:26 am       GIZBOT Mantesh   ಡಿಜಿಟಲ್ ಟೆಕ್

ಈ ವರ್ಷ ಭಾರತದಲ್ಲಿ 10,000 ರೂ ಗಿಂತ ಕಡಿಮೆ ಬೆಲೆಯಲ್ಲಿ ಲಾಂಚ್‌ ಆದ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಗೆ ಎಂಟ್ರಿ ನೀಡಿವೆ.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಮಾರ್ಟ್‌ಫೋನ್‌ ವಲಯದಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೇ ಇದೆ. ಇನ್ನು ಈಗಾಗಲೇ ಈ ವರ್ಷದ ಮಧ್ಯಂತರದಲ್ಲಿ ನಾವೆಲ್ಲಾ ಇದ್ದೇವೆ. ಈ ವರ್ಷದ ಆರಂಭದಿಂದಲೂ ಇಲ್ಲಿ ತನಕ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿವೆ. ಬಜೆಟ್‌ ಬೆಲೆಯಿಂದ ಹಿಡಿದು ಪ್ರಿಮಿಯಂ ಬೆಲೆಯ ಸ್ಮಾರ್ಟ್‌ಫೋನ್‌ಗಳುಹೆಚ್ಚು ಗಮನ ಸೆಳೆದಿವೆ. ಇದರ ನಡುವೆ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಗೆ ಎಂಟ್ರಿ ನೀಡಿವೆ.

ಹೌದು, ಈಗಾಗಲೇ ಈ ವರ್ಷದಲ್ಲಿ ಅರ್ಧ ವರ್ಷ ಮುಗಿದಿದೆ. ಕಳೆದ ವರ್ಷದಂತೆ ಕೊರೊನಾ ಸಾಂಕ್ರಾಮಿಕದ ನಡುವೆ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಇವುಗಳಲ್ಲಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಗಮನ ಸೆಳೆದಿವೆ. ಹಾಗಾದ್ರೆ ಈ ವರ್ಷ ಭಾರತದಲ್ಲಿ 10,000 ರೂ ಗಿಂತ ಕಡಿಮೆ ಬೆಲೆಯಲ್ಲಿ ಲಾಂಚ್‌ ಆದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕಡ್ತಿವಿ ಓದಿರಿ.



ರಿಯಲ್‌ಮಿ C20, C21 ಮತ್ತು C25

ರಿಯಲ್‌ಮಿ ಈ ವರ್ಷ ಏಪ್ರಿಲ್‌ನಲ್ಲಿ ತನ್ನ ಬಜೆಟ್ ಬೆಲೆಯ ಸಿ-ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿತು. ಇದರಲ್ಲಿ ರಿಯಲ್‌ಮಿ C20, C21 ಮತ್ತು C25 ಅನ್ನು ಒಳಗೊಂಡಿದೆ. ರಿಯಲ್‌ಮಿ C25 ಸ್ಮಾರ್ಟ್‌ಫೋನ್‌ ಮೂಲ ಮಾದರಿ 9,999ರೂ, ಗಳಿಂದ ಪ್ರಾರಂಭವಾದರೆ, ರಿಯಲ್‌ಮಿ C21 7,999 ಮತ್ತು ರಿಯಲ್‌ಮಿ C 20 6,999ರೂ.ಗಳಿಂದ ಪ್ರಾರಂಭವಾಗುತ್ತದೆ.



ವಿವೋ Y12s

ವಿವೋ ಹೆಚ್ಚಾಗಿ ಮಧ್ಯ ಶ್ರೇಣಿಯ ವಿಭಾಗದಲ್ಲಿ ಫೋನ್‌ಗಳನ್ನು ಪರಿಚಯಿಸುತ್ತದೆ. ಬಜೆಟ್ ವಿಭಾಗದಲ್ಲಿ, ಈ ವರ್ಷ ವಿವೋ Y12s ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 9,990 ರೂ ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.51 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 439 ಪ್ರೊಸೆಸರ್ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಸಹ ಪ್ಯಾಕ್ ಮಾಡುತ್ತದೆ.



ರೆಡ್ಮಿ 9 ಪವರ್

ಶಿಯೋಮಿ ಸಂಸ್ಥೆ ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್‌ ಅನ್ನು ಬಜೆಟ್‌ ಬೆಲೆಯಲ್ಲಿ ಲಾಂಚ್‌ ಮಾಡಿತ್ತು. ಇದರ ಬೆಲೆ ಕೇವಲ 10,000ರೂ.ಗಳ ಒಳಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 ಪ್ರೊಸೆಸರ್ ಒಳಗೊಂಡಿದೆಎ. ಜೊತೆಗೆ 18W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.



ಸ್ಯಾಮ್‌ಸಂಗ್ ಗ್ಯಾಲಕ್ಸಿ F02s

ಸ್ಯಾಮ್‌ಸಂಗ್‌ ಕೂಡ ಈ ವರ್ಷ ಬಜೆಟ್‌ ಬೆಲೆಯ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಮತ್ತು ಇದು 3GB + 32GB ಮತ್ತು 4GB + 64GB ಯ ಎರಡು ರೂಪಾಂತರಗಳಲ್ಲಿ ಕ್ರಮವಾಗಿ 8,999 ಮತ್ತು 9,999ರೂ, ಬೆಲೆಯಲ್ಲಿ ಬರುತ್ತದೆ. ಗ್ಯಾಲಕ್ಸಿ F02s 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ, ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 450 ಪ್ರೊಸೆಸರ್ ಮತ್ತು 5,000 mAh ಬ್ಯಾಟರಿಯೊಂದಿಗೆ ಬರುತ್ತದೆ. ಇದು 13 ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

(Kannada Copy of Gizbot Kannada)