ಪೊಕೊ M3 ಪ್ರೊ 5G ಫಸ್ಟ್‌ ಲುಕ್: ಬಜೆಟ್‌ ಬೆಲೆಯಲ್ಲಿ ಉತ್ತಮ ಸ್ಮಾರ್ಟ್‌ಫೋನ್!

05-07-21 10:51 am       GIZBOT Mantesh   ಡಿಜಿಟಲ್ ಟೆಕ್

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್ ಹಲವು ಆಕರ್ಷಕ ಫೀಚರ್ಸ್‌ಗಳೊಂದಿಗೆ ಗ್ರಾಹಕರ ಗಮನ ಸೆಳೆದಿದೆ.

ಜನಪ್ರಿಯ ಪೊಕೊ ಬ್ರ್ಯಾಂಡ್‌ ಈಗಾಗಲೇ ಕೆಲವು ಮಾಡೆಲ್‌ ಸ್ಮಾರ್ಟ್‌ಫೋನ್ ಪರಿಚಯಿಸಿ ಸೈ ಅನಿಸಿಕೊಂಡಿದೆ. ಸಂಸ್ಥೆಯು ಇದೀಗ ಇತ್ತೀಚಿಗಷ್ಟೆ ಲಾಂಚ್ ಮಾಡಿರುವ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್ ಹಲವು ಆಕರ್ಷಕ ಫೀಚರ್ಸ್‌ಗಳೊಂದಿಗೆ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಸ್ನ್ಯಾಪ್‌ಡ್ರಾಗನ್ 662 SOC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಪೊಕೊ ಸಂಸ್ಥೆ ತನ್ನ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸಿದೆ. ಈ ಫೋನ್‌ ಮೀಡಿಯಾ ಟೆಕ್ Dimensity 700 SoC ಪ್ರೊಸೆಸರ್‌ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 4GB + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಫೋನ್ ಪಂಚ್ ಹೋಲ್‌ ಡಿಸ್‌ಪ್ಲೇ ರಚನೆ ಇದ್ದು, ಸ್ಕ್ರೀನ್‌ 90Hz ರೀಫ್ರೇಶ್ ರೇಟ್ ಪಡೆದಿದೆ. ಹಾಗಾದರೇ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಕಾರ್ಯವೈಖರಿ ಹೇಗಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 405 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.



ಕ್ಯಾಮೆರಾ ವಿಶೇಷ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಹೊಂದಿದೆ.ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.



ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ 4G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಮತ್ತು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.ಐಆರ್ ಬ್ಲಾಸ್ಟರ್ ಮತ್ತು ಹೈ-ರೆಸ್ ಆಡಿಯೊವನ್ನು ಹೊಂದಿದೆ.



ಬೆಲೆ ಎಷ್ಟು?

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್ 13,999ರೂ.ಗಳಾಗಿದೆ. ಹಾಗೂ 6GB + 128GB ವೇರಿಯಂಟ್ 15,999ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿದೆ.

(Kannada Copy of Gizbot Kannada)