ಸ್ಯಾಮ್‌ಸಂಗ್‌ನ ಈ ಮೂರು ಅಗ್ಗದ ಫೋನ್‌ಗಳ ಬೆಲೆಯಲ್ಲಿ ಡಿಢೀರ್ ಏರಿಕೆ !

10-07-21 12:45 pm       GIZBOT Mantesh   ಡಿಜಿಟಲ್ ಟೆಕ್

ಸ್ಯಾಮ್‌ಸಂಗ್ ಇದೀಗ ಗ್ಯಾಲಕ್ಸಿ A ಸರಣಿಯಲ್ಲಿನ ಮೂರು ಅಗ್ಗದ ಫೋನ್‌ಗಳ ಬೆಲೆಯಲ್ಲಿ ಧಿಡೀರ್ ಏರಿಕೆ ಮಾಡಿದ್ದು, ಗ್ರಾಹಕರಿಗೆ ಅಚ್ಚರಿ ತಂದಿದೆ.

ದಕ್ಷಿಣ ಕೊರಿಯಾ ಟೆಕ್ ದಿಗ್ಗಜ ಸ್ಯಾಮ್‌ಸಂಗ್ ಸಂಸ್ಥೆಯ ಇತ್ತೀಚಿಗೆ ಬಜೆಟ್ ಬೆಲೆಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ಮುಖ್ಯವಾಗಿ ಗ್ಯಾಲಕ್ಸಿ A ಮತ್ತು ಗ್ಯಾಲಕ್ಸಿ M ಸರಣಿಯ ಫೋನ್‌ಗಳು ಟ್ರೆಂಡಿಂಗ್ ಲುಕ್‌ನಲ್ಲಿ ಕಾಣಿಸಿಕೊಂಡಿವೆ. ಆದರೆ ಸ್ಯಾಮ್‌ಸಂಗ್ ಇದೀಗ ಗ್ಯಾಲಕ್ಸಿ A ಸರಣಿಯಲ್ಲಿನ ಮೂರು ಅಗ್ಗದ ಫೋನ್‌ಗಳ ಬೆಲೆಯಲ್ಲಿ ಧಿಡೀರ್ ಏರಿಕೆ ಮಾಡಿದ್ದು, ಗ್ರಾಹಕರಿಗೆ ಅಚ್ಚರಿ ತಂದಿದೆ.

ಹೌದು, ಶಿಯೋಮಿ ಮತ್ತು ಒಪ್ಪೊ ಕಂಪನಿಗಳು ಇತ್ತೀಚಿಗೆ ಆಯ್ದ ಕೆಲವು ಫೋನ್‌ಗಳ ಬೆಲೆಯಲ್ಲಿ ಹೆಚ್ಚಳ ಮಾಡಿದವು. ಅವುಗಳ ಹಾದಿ ಹಿಡಿದಿರುವ ಸ್ಯಾಮ್‌ಸಂಗ್ ಸಹ ಈಗ ಭಾರತದಲ್ಲಿ ಗ್ಯಾಲಕ್ಸಿ ಎ 12, ಗ್ಯಾಲಕ್ಸಿ ಎಂ 02 ಮತ್ತು ಗ್ಯಾಲಕ್ಸಿ ಎಫ್ 02 ಗಳ ಬೆಲೆಯನ್ನು ಹೆಚ್ಚಿಸಿದೆ. ಎಲ್ಲಾ ಮೂರು ಜನಪ್ರಿಯ ಸ್ಮಾರ್ಟ್‌ಫೋನ್‌ಗಳು 500 ರೂ.ಗಳ ಬೆಲೆ ಏರಿಕೆಯನ್ನು ಪಡೆದಿವೆ. ಹಾಗಾದರೇ ಗ್ಯಾಲಕ್ಸಿ ಎ 12, ಗ್ಯಾಲಕ್ಸಿ ಎಂ 02 ಮತ್ತು ಗ್ಯಾಲಕ್ಸಿ ಎಫ್ 02 ಫೋನ್‌ಗಳ ಹೊಸ ಬೆಲೆ ಎಷ್ಟು ಹಾಗೂ ಫೀಚರ್ಸ್‌ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.



ಗ್ಯಾಲಕ್ಸಿ F12 ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾ ಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. 4GB RAM+64GB ವೇರಿಯಂಟ್ ಬೆಲೆ 13,499ರೂ. ಆಗಿದೆ. ಹಾಗೂ 4GB RAM +128GB ವೇರಿಯಂಟ್ ದರವು 14,499ರೂ. ಆಗಿದೆ.



ಗ್ಯಾಲಕ್ಸಿ M02s ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 450 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕಪ್‌ ಅನ್ನು ಹೊಂದಿದ್ದು, ಇದು 15m ಕ್ವಿಕ್ ಚಾರ್ಜ್ ಅನ್ನು ಬೆಂಬಲಿಸಲಿದೆ. 3GB RAM ಮತ್ತು 32GB ಸ್ಟೋರೇಜ್‌ ಬೆಲೆಯು 9,499ರೂ. ಆಗಿದೆ. ಹಾಗೂ 4GB RAM ಮತ್ತು 64GB ವೇರಿಯಂಟ್ ದರವು 10,499ರೂ. ಆಗಿದೆ.



ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಫೀಚರ್ಸ್‌

ಈ ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಇನ್ಫಿನಿಟಿ ವಿ ಮಾದರಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವು ಇದೆ. ಜೊತೆಗೆ 3GB RAM + 32GB ಮತ್ತು 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. 3GB RAM ಮತ್ತು 32GB ಸ್ಟೋರೇಜ್‌ ಬೆಲೆಯು 9,499ರೂ. ಆಗಿದೆ. ಹಾಗೂ 4GB RAM ಮತ್ತು 64GB ವೇರಿಯಂಟ್ ದರವು 10,499ರೂ. ಆಗಿದೆ.

(Kannada Copy of Gizbot Kannada)