ಬ್ರೇಕಿಂಗ್ ನ್ಯೂಸ್
21-07-21 02:26 pm GIZBOT Mantesh ಡಿಜಿಟಲ್ ಟೆಕ್
ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಭಾರತದಲ್ಲಿ ಇಂದು ಹೊಸದಾಗಿ ಗ್ಯಾಲಕ್ಸಿ M21 2021 ಎಡಿಷನ್ ಅನ್ನು ಬಿಡುಗಡೆ ಮಾಡಿದೆ. ಕಂಪನಿಯು ಕಳೆದ ವರ್ಷ ಲಾಂಚ್ ಮಾಡಿದ್ದ ಗ್ಯಾಲಕ್ಸಿ M21 ಫೋನಿನ ಯಶಸ್ಸಿನ ಮುಂದುವರಿದ ಆವೃತ್ತಿ ಇದಾಗಿದೆ. ಇನ್ನು ಈ ನೂತನ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಹಾಗೂ ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿರುವುದು ಆಕರ್ಷಣಿಯವಾಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಎಡಿಷನ್ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಇದೊಂದು ಬಜೆಟ್ ಸ್ಮಾರ್ಟ್‌ಫೋನ್ ಆಗಿದ್ದು, ಆರಂಭಿಕ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ ಜಸ್ಟ್ 12,499ರೂ. ಆಗಿದೆ. ಆಕ್ಟಾ ಕೋರ್ Exynos 9611 SoC ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದೆ. ಬ್ಲೂ ಮತ್ತು ಚಾರ್ಕೋಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇನ್ನು ಇದೇ ಜುಲೈ 26ರಂದು ಖರೀದಿಗೆ ಲಭ್ಯವಾಗಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಎಡಿಷನ್ ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಹಾಗೂ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯವನ್ನು ಪಡೆದಿದೆ.
ಪ್ರೊಸೆಸರ್ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G72 MP3 GPU ಪಡೆದಿದೆ. ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.
ಟ್ರಿಪಲ್ ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5 ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20 ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಮಾಡೆಲ್‌ಗಳ ಆಯ್ಕೆ ಹೊಂದಿದೆ. 4GB RAM + 64GB ಸ್ಟೋರೇಜ್‌ನ ಬೇಸ್ ವೇರಿಯಂಟ್ ದರವು 12,499ರೂ. ಆಗಿದೆ. ಹಾಗೆಯೇ 6GB RAM + 128GB ವೇರಿಯಂಟ್ ಬೆಲೆಯು 14,499ರೂ. ಆಗಿದೆ. ಇನ್ನು ಈ ಫೋನ್ ಇದೇ ಜುಲೈ 26 ರಂದು ಅಮೆಜಾನ್, ಸ್ಯಾಮ್‌ಸಂಗ್ ವೆಬ್‌ಸೈಟ್ ಹಾಗೂ ಪ್ರಮುಖ ಆಫ್‌ಲೈನ್ ಸ್ಟೋರ್‌ಗಳಲ್ಲಿ ಖರೀದಿಗೆ ಸಿಗಲಿದೆ. ಈ ಫೋನ್ ಬ್ಲೂ ಮತ್ತು ಚಾರ್ಕೋಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.
(Kannada Copy of Gizbot Kannada)
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm