ಬ್ರೇಕಿಂಗ್ ನ್ಯೂಸ್
01-08-21 08:27 pm GIZBOT KANNADA ಡಿಜಿಟಲ್ ಟೆಕ್
ಪ್ರಮುಖ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ರಿಯಲ್ ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಭಿನ್ನ ಶ್ರೇಣಿಯ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿರುವ ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಬಜೆಟ್ ಪ್ರೈಸ್ ಟ್ಯಾಗ್‌ನಲ್ಲಿ ಗ್ರಾಹಕರನ್ನು ಸೆಳೆದಿದೆ. ಹಾಗೆಯೇ ಈ ಫೋನಿನ ಫೀಚರ್ಸ್‌ಗಳು ಸಹ ಗಮನ ಸೆಳೆದಿವೆ.
ಹೊಸದಾಗಿ ಭಾರತೀಯ ಮಾರುಕಟ್ಟೆಗೆ ಲಗ್ಗೆ ಹಾಕಿರುವ ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಬಜೆಟ್ ಫೋನ್ ಆಗಿದ್ದರು ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G70 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಓಎಸ್ ಪಡೆದಿದೆ. ಇದರೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಅಪ್ ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಅನಿಸಿದೆ. ಜೊತೆಗೆ ಟ್ರಿಪಲ್ ರಿಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಹಾಗಾದರೇ ರಿಯಲ್ ಮಿ C25 ಸ್ಮಾರ್ಟ್‌ಫೋನಿನ ಮೊದಲ ನೋಟ ಫಲಿತಾಂಶ ಏನು?..ಯಾವೆಲ್ಲಾ ಫೀಚರ್ಸ್‌ಗಳು ಇವೆ ಎಂಬುದನ್ನು ಮುಂದೆ ತಿಳಿಯೋಣ.
ತನ್ನ ವರ್ಗದಲ್ಲೇ ಗಮನ ಸೆಳೆವ ಡಿಸೈನ್ ರಿಯಲ್‌ಮಿ C25 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ. ಡಿಸ್‌ಪ್ಲೇಯು 2.5 ಡಿ ಬಾಗಿದ ಟೆಂಪರ್ಡ್ ಗ್ಲಾಸ್‌ನಿಂದ ರಕ್ಷಿಸಲಾಗಿದೆ. ಇದು ಸ್ವಲ್ಪ ವಾಟರ್-ಡ್ರಾಪ್ ದರ್ಜೆಯನ್ನು ಹೊಂದಿದೆ, ಇದು ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ತನ್ನ ವರ್ಗದಲ್ಲೇ ಗಮನ ಸೆಳೆವ ಡಿಸೈನ್ ಇದಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.
ಪ್ರೊಸೆಸರ್ ವೇಗ ಹೇಗಿದೆ
ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G70 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಆಕ್ಟಾ-ಕೋರ್ ಪ್ರೊಸೆಸರ್ ಸಾಮಾಜಿಕ ಮಾಧ್ಯಮ ಸೈಟ್‌ಗಳನ್ನು ಬ್ರೌಸ್ ಮಾಡುವುದು, ವೀಡಿಯೊಗಳನ್ನು ನೋಡುವುದು, ಕರೆ ಮಾಡುವುದು, ಯಾವುದೇ ಸಮಸ್ಯೆಯಿಲ್ಲದೆ ಸಂದೇಶ ಕಳುಹಿಸುವುದು ಮುಂತಾದ ದಿನನಿತ್ಯದ ಕಾರ್ಯಗಳನ್ನು ಸುಲಭವಾಗಿ ನಿಭಾಯಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಮತ್ತು 4GB RAM + 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.
ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್
ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಮೂರನೇ ಕ್ಯಾಮೆರಾವು ಸಹ 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ 5 ಮೆಗಾ ಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ತನ್ನ ರೇಂಜ್‌ನಲ್ಲಿ ಅತ್ಯುತ್ತಮ ಕ್ಯಾಮೆರಾ ಎನ್ನಬಹುದಾಗಿದೆ.
ಬ್ಯಾಟರಿ ಶಕ್ತಿ ಮತ್ತು ಇತರೆ ಸೌಲಭ್ಯ
ರಿಯಲ್‌ಮಿ C25 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಅಪ್ ಅನ್ನು ಹೊಂದಿದ್ದು, ಇದು 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಎಫ್ಐ 802.11 ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮೈಕ್ರೋ-ಯುಎಸ್ಬಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ. ಮಂಡಳಿಯಲ್ಲಿನ ಸಂವೇದಕಗಳಲ್ಲಿ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ. ಫೋನ್ ಹಿಂಭಾಗದಲ್ಲಿ ಫಿಂಗರ್ಪ್ರಿಂಟ್ ಸೆನ್ಸಾರ್ನೊಂದಿಗೆ ಬರುತ್ತದೆ.
ಬೆಲೆ ಎಷ್ಟು ಮತ್ತು ಲಭ್ಯತೆ?
ಭಾರತೀಯ ಮಾರುಕಟ್ಟೆಯಲ್ಲಿ ರಿಯಲ್‌ಮಿ C25 ಸ್ಮಾರ್ಟ್‌ಫೋನ್ 4GB RAM + 64GB ವೇರಿಯಂಟ್ ದರವು 9,999ರೂ. ಆಗಿದ್ದು, 4GB RAM + 128GB ವೇರಿಯಂಟ್ ಬೆಲೆಯು 10,999ರೂ. ಆಗಿದೆ.
Realme's one of the biggest players in the budget segment of the market. The company has made a name for itself by launching value for money propositions that also appeal to heavy users. The latest of such phones is the Realme C25(₹ 9999 at flipkart). Starting at Rs 9,999 for its entry-level variant, the Realme C25 brings with it a mix of interesting hardware, cameras, and features all at an aggressive price.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm