ಪೊಕೊ F3 GT ಮತ್ತು ಒನ್‌ಪ್ಲಸ್‌ ನಾರ್ಡ್‌ 2 ಫೋನ್‌: ಖರೀದಿಗೆ ಯಾವುದು ಬೆಸ್ಟ್?

09-08-21 03:29 pm       Gizbot, Mantesh   ಡಿಜಿಟಲ್ ಟೆಕ್

ಜನಪ್ರಿಯ ಪೊಕೊ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ಪೊಕೊ F3 GT ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಆಕರ್ಷಕ ಗೇಮಿಂಗ್ ಫೀಚರ್ಸ್‌ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ.

ಜನಪ್ರಿಯ ಪೊಕೊ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ಪೊಕೊ F3 GT ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಆಕರ್ಷಕ ಗೇಮಿಂಗ್ ಫೀಚರ್ಸ್‌ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಫೋನ್ ಕ್ರಮವಾಗಿ ಕ್ವಾಡ್‌ ಮತ್ತು ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ರಚನೆ ಪಡೆದಿರುವುದು ಹೈಲೈಟ್‌ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ಒನ್‌ಪ್ಲಸ್‌ ನಾರ್ಡ್‌ 2 ಸ್ಮಾರ್ಟ್‌ಫೋನ್ ಸಹ ಮೀಡ್‌ ರೇಂಜ್‌ನಲ್ಲಿ ಆಕರ್ಷಕ ಫೀಚರ್ಸ್‌ಗಳಿಂದ ಫೋ

ಹೌದು, ಪೊಕೊ ಸಂಸ್ಥೆಯ ನೂತನ ಪೊಕೊ F3 GT ಮತ್ತು ಒನ್‌ಪ್ಲಸ್‌ ನಾರ್ಡ್‌ 2 ಸ್ಮಾರ್ಟ್‌ಫೋನ್‌ಗಳು ಹೈ ಎಂಡ್ ಮಾದರಿಯ ಫೀಚರ್ಸ್‌ಗಳನ್ನು ಹೊಂದಿರುವುದು ಮೊದಲ ಆಕರ್ಷಣೆ ಎನಿಸಿದೆ. ಹಾಗೆಯೇ ಈ ಎರಡು ಫೋನ್‌ಗಳು ಕ್ವಾಡ್‌ ಕ್ಯಾಮೆರಾ ರಚನೆ ಪಡೆದಿರುವುದು ಜೊತೆಗೆ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆಯನ್ನು ಹೊಂದಿರುವುದು ಪ್ಲಸ್‌ ಪಾಯಿಂಟ್‌ ಆಗಿ ಕಾಣಿಸಿಕೊಂಡಿವೆ. ಈ ಎರಡು ಫೋನ್‌ಗಳ ಬಹುತೇಕ ಫೀಚರ್ಸ್‌ಗಳಲ್ಲಿ ಸಾಮ್ಯತೆ ಕಂಡು ಬಂದರು, ಭಿನ್ನತೆಗಳು ಇವೆ. ಹಾಗಾದರೇ ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ? ಇವೆರಡು ಫೋನ್‌ಗಳ ಕಂಪ್ಲೀಟ್‌ ಫೀಚರ್ಸ್‌ ಮಾಹಿತಿ ಮುಂದೆ ನೋಡೋಣ ಬನ್ನಿರಿ.



ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ F3 GT ಸ್ಮಾರ್ಟ್‌ಫೋನ್‌ 6.67-ಇಂಚಿನ ಟರ್ಬೊ ಅಮೋಲೆಡ್ 10-ಬಿಟ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೆಚ್‌ಡಿಆರ್ 10+ ಬೆಂಬಲ ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು 480 ಹೆಚ್ ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದುಕೊಂಡಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.



ಪ್ರೊಸೆಸರ್‌ ಯಾವುದು

ಪೊಕೊ F3 GT ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB, 8GB RAM+ 128GB ಮತ್ತು 8GB RAM + 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಅದೇ ರೀತಿ ಒನ್‌ಪ್ಲಸ್‌ ನಾರ್ಡ್‌ 2 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ.



ಕ್ಯಾಮೆರಾ ಸೆನ್ಸಾರ್ ಹೇಗೆ

ಪೊಕೊ F3 GT ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಪೋರ್ಟಿ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ಈ ಫೋನ್ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್, ಎಐ ವಿಡಿಯೋ ವರ್ಧನೆ, ಎಐ ಫೋಟೋ ವರ್ಧನೆ ಮತ್ತು ಡ್ಯುಯಲ್ ವ್ಯೂ ವಿಡಿಯೋದಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ F3 GT ಸ್ಮಾರ್ಟ್‌ಫೋನ್‌ 5,065mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು ಐಪಿ 53 ರೇಟ್ ಆಗಿದೆ ಮತ್ತು ಗೇಮಿಂಗ್ ಮಾಡುವಾಗ ಉತ್ತಮ ಧ್ವನಿ ಗುಣಮಟ್ಟಕ್ಕಾಗಿ ಮೂರು ಮೈಕ್ರೊಫೋನ್ಗಳನ್ನು ಸಂಯೋಜಿಸುತ್ತದೆ. ಇದು ವೈ-ಫೈ ಗೇಮಿಂಗ್ ಆಂಟೆನಾ, ನಿಖರವಾದ ಹ್ಯಾಪ್ಟಿಕ್ ಪ್ರತಿಕ್ರಿಯೆ ಮತ್ತು ಕಂಪನದೊಂದಿಗೆ ಎಕ್ಸ್-ಶಾಕರ್ಸ್, ಜಿಟಿ ಸ್ವಿಚ್ ಮತ್ತು ಮ್ಯಾಗ್ಲೆವ್ ಪ್ರಚೋದಕಗಳನ್ನು ಬೆಂಬಲಿಸುತ್ತದೆ. ಹಾಗೆಯೇ ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಡಾರ್ಕ್ ಮೋಡ್ ಮತ್ತು ಒನ್‌ಪ್ಲಸ್ ಗೇಮ್ಸ್ ಅಪ್ಲಿಕೇಶನ್‌ ಸಪೋರ್ಟ್ ಪಡೆದಿದೆ. ಅದು ಗೇಮ್ ಫಿಲ್ಟರ್‌ಗಳನ್ನು ಒದಗಿಸುತ್ತದೆ. ಹಾಗೆಯೇ ಇತ್ತೀಚಿಗಿನ ಕನೆಕ್ಟಿವಿಟಿ ಸೌಲಭ್ಯಗಳು ಸೇರಿವೆ.



ಬೆಲೆ ಮತ್ತು ಲಭ್ಯತೆ

ಪೊಕೊ F3 GT ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM + 128GB ಸ್ಟೋರೇಜ್ ಆಯ್ಕೆಗೆ 26,999 ರೂ, ಹಾಗೂ 8GB RAM+ 128GB ಸ್ಟೋರೇಜ್ ಆಯ್ಕೆಗೆ 28,999,ರೂ ಬೆಲೆಯನ್ನು ಹೊಂದಿದೆ. ಇನ್ನು 8GB RAM + 256GB ಸಂಗ್ರಹದ ಬೆಲೆ 30,999 ರೂ. ಹೊಂದಿದೆ. ಅದೇ ರೀತಿ ಒನ್‌ಪ್ಲಸ್ ನಾರ್ಡ್ 2 5G ಮೂರು ಮಾದರಿಗಳಲ್ಲಿ ಎಂಟ್ರಿ ಪಡೆದಿದೆ. ಅವು ಕ್ರಮವಾಗಿ 6 GB RAM + 128GB, 8GB RAM + 128GB ಮತ್ತು 12GB RAM + 256GB ಆಗಿವೆ. 6GB RAM ಮತ್ತು 128GB ಬೇಸ್ ವೇರಿಯಂಟ್ ಬೆಲೆಯು 27,999ರೂ. ಆಗಿದೆ. ಅದೇ ರೀತಿ 8GB RAM ಮತ್ತು 128GB ವೇರಿಯಂಟ್ ಬೆಲೆಯು 29,999ರೂ. ಆಗಿದೆ. ಇನ್ನು 12GB RAM + 256GB ಸ್ಟೋರೇಜ್‌ನ ಟಾಪ್‌ ಮಾಡೆಲ್ ದರವು 34,999ರೂ. ಆಗಿದೆ.

(Kannada Copy of Gizbot Kannada)