ಬಜೆಟ್‌ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ವಿವೋ Y33s ಸ್ಮಾರ್ಟ್‌ಫೋನ್!

23-08-21 05:24 pm       Gizbot, Mantesh   ಡಿಜಿಟಲ್ ಟೆಕ್

ವಿವೋ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ ವಿವೋ Y33s ಸ್ಮಾರ್ಟ್‌ಫೋನ್‌ ಅನ್ನು ಇಂದು ದೇಶಿಯ ಮೊಬೈಲ್‌ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಸಂಸ್ಥೆ ವಿವೋ ಕಂಪೆನಿ ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಕಂಪನಿಯು ಇದೀಗ ಹೊಸದಾಗಿ ವಿವೋ Y33s ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಅಧಿಕ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಆಕರ್ಷಕ ಎನಿಸಿಕೊಂಡಿದೆ.

ಹೌದು, ವಿವೋ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ ವಿವೋ Y33s ಸ್ಮಾರ್ಟ್‌ಫೋನ್‌ ಅನ್ನು ಇಂದು (ಆ.23) ದೇಶಿಯ ಮೊಬೈಲ್‌ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್‌ನ ಆಯ್ಕೆಯನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಹಾಗಾದರೇ ವಿವೋ Y33s ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.



ಆಕರ್ಷಕ ಡಿಸ್‌ಪ್ಲೇ ರಚನೆ

ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಡಿಸ್‌ಪ್ಲೇಯು Halo ಫುಲ್‌ ವ್ಯೂವ್ ಮಾದರಿಯನ್ನು ಪಡೆದಿದ್ದು, ಪಂಚ್‌ಹೋಲ್ ವಿನ್ಯಾಸ ಹೊಂದಿದೆ.



ಪ್ರೊಸೆಸರ್ ಯಾವುದು

ವಿವೋ Y33s ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM ಸಾಮರ್ಥ್ಯ ಮತ್ತು 128GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ಇದೆ.



ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ವಿವೋ Y33s ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. ಸೆಕೆಂಡರಿ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ನಲ್ಲಿದ್ದು, ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಅಧಿಕ ಬ್ಯಾಟರಿ

ಬ್ಯಾಕ್‌ಅಪ್‌ ವಿವೋ Y33s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ. ಇದರೊಂದಿಗೆ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5 ಮತ್ತು USB OTG ಆಯ್ಕೆ ನೀಡಲಾಗಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.



ಬೆಲೆ ಎಷ್ಟು ಮತ್ತು ಲಭ್ಯತೆ

ವಿವೋ Y33s ಸ್ಮಾರ್ಟ್‌ಫೋನ್ ಇಂದು (ಅ.23) ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ಮಾಡೆಲ್‌ ಬೆಲೆಯು 17,990 ರೂ. ಆಗಿದೆ. ಇನ್ನು ಈ ಫೋನ್ ಮಿಡ್ ಡೇ ಡ್ರೀಮ್ ಮತ್ತು ಮೀರರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತದೆ. ಅಧಿಕೃತ ವಿವೋ ಸೈಟ್‌ ಹಾಗೂ ಪ್ರಮುಖ ಇ-ಕಾಮರ್ಸ್‌ ತಾಣಗಳಲ್ಲಿ ಈ ಫೋನ್ ಖರೀದಿಗೆ ಲಭ್ಯವಾಗಲಿದೆ.

(Kannada Copy of Gizbot Kannada)