ಬ್ರೇಕಿಂಗ್ ನ್ಯೂಸ್
25-08-21 04:21 pm Gizbot, Mutthuraju H M ಡಿಜಿಟಲ್ ಟೆಕ್
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ಗ್ಯಾಲಕ್ಸಿ ಎ ಮತ್ತು ಎಂ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಎಂ ಸರಣಿಯಲ್ಲಿ ಹೊಸ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್‌ನ ನಾಕ್ಸ್ ಸೆಕ್ಯುರಿಟಿ ಅಂತರ್ನಿರ್ಮಿತವಾಗಿದೆ. ಈ ಫೋನ್ ಎರಡು ಬಣ್ಣ ಮತ್ತು ಎರಡು ಸಂರಚನೆಗಳಲ್ಲಿ ನೀಡಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ಒನ್‌ಯುಐ 3.1 ನೊಂದಿಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಶೇಷ
ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, ವೈ-ಫೈ, ಬ್ಲೂಟೂತ್, ಮತ್ತು ಜಿಪಿಎಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಬೆಲೆ 6GB RAM + 128GB ಸ್ಟೋರೇಜ್ ಮಾದರಿಗೆ 20,999ರೂ ಹೊಂದಿದೆ. ಇದು 8GB RAM + 128GB ಮಾದರಿಯೂ ಇದೆ ಆದರೆ ಇದರ ಬೆಲೆ ಇನ್ನೂ ಅನಾವರಣಗೊಂಡಿಲ್ಲ. ಈ ಸ್ಮಾರ್ಟ್‌ಫೋನ್ ಅನ್ನು ಸ್ಲೇಟ್ ಬ್ಲಾಕ್ ಮತ್ತು ಸ್ಕೈ ಬ್ಲೂ ಬಣ್ಣದಲ್ಲಿ ನೀಡಲಾಗಿದೆ. ಇದು ಅಮೆಜಾನ್ ಮೂಲಕ ಸೆಪ್ಟೆಂಬರ್ 2 ರಂದು ಮಧ್ಯಾಹ್ನ 1 ರಿಂದ ಮಾರಾಟಕ್ಕೆ ಬರುತ್ತದೆ. ಲಾಂಚ್ ಆಫರ್‌ನಲ್ಲಿ ಇದರ ಮೇಲೆ 2,000ರೂ, ತ್ವರಿತ ರಿಯಾಯಿತಿ ದೊರೆಯಲಿದೆ.
(Kannada Copy of Gizbot Kannada)
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am