ರಿಯಲ್‌ಮಿ GT ಫಸ್ಟ್‌ ಲುಕ್: ಮೀಡ್‌ರೇಂಜ್‌ನಲ್ಲಿ ಫ್ಲ್ಯಾಗ್‌ಶಿಪ್‌ ಕಿಲ್ಲರ್ ಸ್ಮಾರ್ಟ್‌ಫೋನ್‌!

30-08-21 11:42 am       Gizbot, Mantesh   ಡಿಜಿಟಲ್ ಟೆಕ್

ರಿಯಲ್‌ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಪರಿಚಯಿಸಿರುವ ರಿಯಲ್‌ಮಿ GT ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ರಿಯಲ್‌ಮಿಯು ಈಗಾಗಲೇ ಭಿನ್ನ ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ GT ಸ್ಮಾರ್ಟ್‌ಫೋನ್ ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ ಹೈ ಎಂಡ್‌ ಫೀಚರ್ಸ್ ಸಪೋರ್ಟ್‌ ನೊಂದಿಗೆ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ.

ಹೌದು, ರಿಯಲ್‌ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಪರಿಚಯಿಸಿರುವ ರಿಯಲ್‌ಮಿ GT ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 120Hz ರೀಫ್ರೇಶ್‌ ರೇಟ್ ಒಳಗೊಂಡ ಸೂಪರ್ AMOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗಾದರೇ ರಿಯಲ್‌ಮಿ GT ಸ್ಮಾರ್ಟ್‌ಫೋನಿನ ಫಸ್ಟ್‌ ಲುಕ್ ಹೇಗಿದೆ?.. ಫೀಚರ್ಸ್‌ಗಳ ಕಾರ್ಯ ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.



ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ರಿಯಲ್‌ಮಿ GT ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ದರ, 360Hz ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 91.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.



ಪ್ರೊಸೆಸರ್‌ ಕಾರ್ಯವೈಖರಿ ಹೇಗೆ

ರಿಯಲ್‌ಮಿ GT ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್‌ನ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಧಿಕ RAM ಬಯಸುವ ಗ್ರಾಹಕರಿಗೆ ಈ ಫೋನ್ ಆಕರ್ಷಕ ಎನಿಸಲಿದೆ. ಪ್ರೊಸೆಸರ್ ವೇಗವು ಉತ್ತಮವಾಗಿದ್ದು, ಮಲ್ಟಿಟಾಸ್ಕ್ ಕೆಲಸಗಳು ಸರಾಗವಾಗಿ ನಡೆಯುತ್ತವೆ.



ತ್ರಿವಳಿ ಕ್ಯಾಮೆರಾ ರಚನೆ

ರಿಯಲ್‌ಮಿ GT ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 682 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ವೈಡ್‌ ಆಂಗಲ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.



ಬ್ಯಾಟರಿ ಮತ್ತು ಇತರೆ

ಫೀಚರ್ಸ್‌ ರಿಯಲ್‌ಮಿ GT ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ಸೂಪರ್‌ಡಾರ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಚಾರ್ಜಿಂಗ್ ತಂತ್ರಜ್ಞಾನವು 35 ನಿಮಿಷಗಳಲ್ಲಿ ಅಂತರ್ನಿರ್ಮಿತ ಬ್ಯಾಟರಿಯನ್ನು ಶೂನ್ಯದಿಂದ 100 ಪ್ರತಿಶತದವರೆಗೆ ಚಾರ್ಜ್ ಮಾಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ 6, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ಟ್ ಸೆನ್ಸಾರ್ ಹೊಂದಿದೆ.



ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ GT 8GB RAM + 128GB ಸ್ಟೋರೇಜ್‌ ವೇರಿಯಂಟ್ ಆಯ್ಕೆಯ ಬೆಲೆ 37,999ರೂ. ಆಗಿದೆ. ಹಾಗೆಯೇ 12GB + 256GB ಸ್ಟೋರೇಜ್‌ ವೇರಿಯಂಟ್ ಆಯ್ಕೆಯ 41,999ರೂ.ಗಳು ಆಗಿದೆ. ಇನ್ನು ಈ ಫೋನ್ ಡ್ಯಾಶಿಂಗ್ ಬ್ಲೂ ಮತ್ತು ಡ್ಯಾಶಿಂಗ್ ಸಿಲ್ವರ್ ಬಣ್ಣಗಳ ಆಯ್ಕೆ ಪಡೆದಿದೆ. ಸೇಲ್‌ನಲ್ಲಿ ಆಯ್ದ ಬ್ಯಾಂಕ್‌ಗಳಿಂದ ಆಕರ್ಷಕ ರಿಯಾಯಿತಿ ಸಹ ಸಿಗಲಿದೆ.