ಇಂದು ರೆಡ್ಮಿ 10 ಪ್ರೈಮ್ ಫಸ್ಟ್‌ ಸೇಲ್‌; ಬೆಲೆ ಕೇಳಿದ್ರೆ ಗ್ರಾಹಕರು ಫಿದಾ!

07-09-21 12:46 pm       Gizbot, Mantesh   ಡಿಜಿಟಲ್ ಟೆಕ್

ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ.

ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಫಸ್ಟ್ ಸೇಲ್ ಇಂದು ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ 4 GB RAM + 64 GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 12,499ರೂ.ಗಳು ಆಗಿದೆ.

ಹೌದು, ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಸೆ.7) ನಡೆಯಲಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 6,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಮೂರು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB RAM ಮತ್ತು 128GBಆಗಿವೆ. ಆಸ್ಟ್ರಲ್ ವೈಟ್, ಬಿಫ್ರಾಸ್ಟ್ ವೈಟ್ ಮತ್ತು ಫ್ಯಾಂಟಮ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ. ಎಚ್‌ಡಿಎಫ್‌ಸಿ ಕಾರ್ಡ್‌ ಮೂಲಕ ಖರಿದಿಸುವ ಗ್ರಾಹಕರಿಗೆ 750ರೂ. ಕ್ಯಾಶ್‌ಬ್ಯಾಕ್ ಸೌಲಭ್ಯ ಇದೆ. ಹಾಗಾದರೇ ರೆಡ್ಮಿ 10 ಪ್ರೈಮ್ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.



ಡಿಸ್‌ಪ್ಲೇ ವಿನ್ಯಾಸ

ರೆಡ್‌ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9ರಚನೆಯ ಅನುಪಾತ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ಅಡಾಪ್ಟಿವ್ ರಿಫ್ರೆಶ್ ರೇಟ್‌ ಹೊಂದಿದ್ದು, ಅದು 45Hz, 60Hz ಮತ್ತು 90Hz ರಿಫ್ರೆಶ್ ರೇಟ್‌ಗಳ ನಡುವೆ ಬದಲಾಯಿಸಲು ಕಂಟೆಂಟ್ ಫ್ರೇಮ್‌ಗೆ ಹೊಂದಿಕೆಯಾಗುತ್ತದೆ.



ಪ್ರೊಸೆಸರ್‌ ಬಲ ಯಾವುದು

ರೆಡ್‌ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ 2GB ವರೆಗಿನ RAM ವಿಸ್ತರಣೆಗೆ ಬೆಂಬಲಿಸಲಿದೆ.



ಕ್ವಾಡ್‌ ಕ್ಯಾಮೆರಾ

ವಿಶೇಷ ರೆಡ್‌ಮಿ 10 ಪ್ರೈಮ್ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಕ್ಯಾಮರಾ ಸೆಟಪ್ ಫುಲ್‌ ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.



ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌ 6,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು 22.5W ಚಾರ್ಜರ್ ಮತ್ತು 9W ವರೆಗೆ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್‌ v5.1, GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.



ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌ ಬೆಲೆ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 12,499ರೂ ಹಾಗೂ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 14,499ರೂ, ಬೆಲೆ ಹೊಂದಿದೆ. ಇದು ಆಸ್ಟ್ರಲ್ ವೈಟ್, ಬಿಫ್ರಾಸ್ಟ್ ವೈಟ್ ಮತ್ತು ಫ್ಯಾಂಟಮ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್ ಇಂದು (ಸೆಪ್ಟೆಂಬರ್ 7 ರಿಂದ) ಅಮೆಜಾನ್, Mi.ಕಾಮ್, ಮಿ ಹೋಮ್ ಸ್ಟೋರ್ಸ್ ಹಾಗೂ ಪ್ರಮುಖ ರಿಟೇಲ್ ಮಳಿಗೆಗಳಲ್ಲಿ ಮಾರಾಟವಾಗಲಿದೆ.