ವಿವೋ X 70 ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆ! ವಿಶೇಷತೆ ಏನು?

10-09-21 11:47 am       Gizbot, Mantesh   ಡಿಜಿಟಲ್ ಟೆಕ್

ವಿವೋ ಕಂಪೆನಿ ಹೊಸ ವಿವೋ X 70 ಸ್ಮಾರ್ಟ್‌ಫೋನ್‌ ಸರಣಿಯನ್ನು ಲಾಂಚ್‌ ಮಾಡಿದೆ.

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ವಿವೋ X 70 ಸರಣಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸರಣಿ ವಿವೋ X70, ವಿವೋ X70 ಪ್ರೊ ಮತ್ತು ವಿವೋ X70 ಪ್ರೊ+ ಅನ್ನು ಒಳಗೊಂಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ವಿಭಿನ್ನ ಮಾದರಿಯ ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿವೆ.

ಹೌದು, ವಿವೋ ಕಂಪೆನಿ ಹೊಸ ವಿವೋ X 70 ಸ್ಮಾರ್ಟ್‌ಫೋನ್‌ ಸರಣಿಯನ್ನು ಲಾಂಚ್‌ ಮಾಡಿದೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳು 12GB RAM ಅನ್ನು ಪಡೆದುಕೊಂಡಿವೆ.ಅಲ್ಲದೆ ವಿವೋ X70 ಸರಣಿಯ ಕ್ಯಾಮರಾಗಳನ್ನು Zeiss ಟ್ಯೂನ್ ಮಾಡಲಾಗಿದೆ. ಇದರಲ್ಲಿ ವಿವೋ X70 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ವಿವೋ X70 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನುಳಿದಂತೆ ಈ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.



ವಿವೋ X70 ವಿಶೇಷತೆ

ವಿವೋ X70 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 19.8:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಒರಿಜಿನೋಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.



ವಿವೋ X70 ಪ್ರೊ

ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ ಕೂಡ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 1080SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,450mAh ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾ ಹೊಂದಿದೆ.



ವಿವೋ X70 ಪ್ರೊ+

ವಿವೋ X70ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.78-ಇಂಚಿನ ಅಲ್ಟ್ರಾ-ಹೆಚ್‌ಡಿ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹಾಗೂ 120Hz ರಿಫ್ರೇಶ್‌ ರೇಟ್‌ ಅನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.



ಬೆಲೆ ಮತ್ತು ಲಭ್ಯತೆ

ವಿವೋ X70 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 3,699 (ಅಂದಾಜು 42,100ರೂ), 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ CNY 3,999 (ಅಂದಾಜು 45,500ರೂ) ಮತ್ತು 12GB RAM + 256GB ಶೇಖರಣಾ ರೂಪಾಂತರಕ್ಕಾಗಿ CNY 4,299 (ಸುಮಾರು 49,000ರೂ) ಬೆಲೆ ಹೊಂದಿದೆ. ವಿವೋ X70 ಪ್ರೊ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 4,299 (ಅಂದಾಜು 49,001ರೂ) ಮತ್ತು 8GB RAM + 256GB ಸ್ಟೋರೇಜ್ ವೇರಿಯಂಟ್‌ಗೆ CNY 4,599 (ಸರಿಸುಮಾರು ರೂ. 52,400), ಬೆಲೆ ಹೊಂದಿದೆ. ವಿವೋ X70 ಪ್ರೊ + ಸ್ಮಾರ್ಟ್‌ಫೋನ್‌ 8 ಜಿಬಿ RAM + 256 ಜಿಬಿ ಸ್ಟೋರೇಜ್ ವೇರಿಯಂಟ್ ಗೆ ಸಿಎನ್‌ವೈ 5,499 (ಅಂದಾಜು 62,700ರೂ) ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ಗಳು ಕಪ್ಪು,ನೆಬುಲಾ ಮತ್ತು ಬಿಳಿ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿವೆ.