ಸ್ಯಾಮ್‌ಸಂಗ್ ಗ್ಯಾಲಕ್ಸಿ ವೈಡ್‌ 5 ಫೋನ್ ಲಾಂಚ್!..ಟ್ರಿಪಲ್‌ ಕ್ಯಾಮೆರಾ!

10-09-21 04:31 pm       Gizbot, Mantesh   ಡಿಜಿಟಲ್ ಟೆಕ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಇನ್‌ಫಿನಿಟಿ V ಮಾದರಿಯ ಡಿಸ್‌ಪ್ಲೇ ಹೊಂದಿದೆ.

ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆ ಸ್ಯಾಮ್‌ಸಂಗ್ ಸಂಸ್ಥೆಯು ನೂತನವಾಗಿ ಗ್ಯಾಲಕ್ಸಿ ವೈಡ್‌ 5 ಹೆಸರಿನ ಸ್ಮಾರ್ಟ್‌ಫೋನ್ ಅನ್ನು ದಕ್ಷಿಣ ಕೊರಿಯಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಸೆಲ್ಫಿಗಾಗಿ 8 ಮೆಗಾ ಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ ಮೀಡಿಯಾ ಟೆಕ್ Dimensity 700 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಜೊತೆಗೆ 5,000mAh ಸಾಮರ್ಥ್ಯ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಗ್ರಾಹಕರ ಗಮನ ಸೆಳೆದಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ ವೈಡ್‌ 5 ಹೆಸರಿನ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಮೀಡಿಯಾ ಟೆಕ್ Dimensity 700 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುವ ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಇನ್ನು ಈ ಫೋನ್ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲವನ್ನು ಹೊಂದಿದೆ. ಹಾಗೆಯೇ ಈ ಫೋನ್ 6GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಪಡೆದಿದೆ. ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಆಯ್ಕೆ ಇದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ ವೈಡ್‌ 5 ಫೋನಿನ ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.



ಡಿಸ್‌ಪ್ಲೇ ವಿನ್ಯಾಸ ಹಾಗೂ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಇನ್‌ಫಿನಿಟಿ V ಮಾದರಿಯ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಫೋನ್ 76.4x167.2x9mm ಸುತ್ತಳತೆಯನ್ನು ಹೊಂದಿದ್ದು, ಇದರ ಪಿಕ್ಸೆಲ್‌ ಸಾಂದ್ರತೆಯು ಉತ್ತಮವಾಗಿದೆ.



ಯಾವ ಪ್ರೊಸೆಸರ್‌ ಬಲ

ಇದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ Dimensity 700 SoC ಪ್ರೊಸೆಸರ್‌ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 6GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಅನ್ನು 1TB ವರೆಗೂ ವಿಸ್ತರಿಸಲು ಅವಕಾಶ ಇದೆ.



ತ್ರಿವಳಿ ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು ಕ್ರಮವಾಗಿ 2 ಮೆಗಾ ಪಿಕ್ಸಲ್ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ ಸೆಲ್ಫಿಗಾಗಿ 8 ಮೆಗಾ ಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಫೋಟೊ ಹಾಗೂ ವಿಡಿಯೋ ಎಡಿಟಿಂಗ್ ಆಯ್ಕೆಗಳಿವೆ.



ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ ಸೂಕ್ತ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಹಾಗೆಯೇ ಈ ಫೋನ್ 203 ಗ್ರಾಂ ತೂಕ ಪಡೆದಿದೆ. ಜೊತೆಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 11 ಓಎಸ್‌, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ ಗ್ಯಾಲಕ್ಸಿ ವೈಡ್‌ 5 ಸ್ಮಾರ್ಟ್‌ಫೋನ್‌ ಸೂಕ್ತ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಹಾಗೆಯೇ ಈ ಫೋನ್ 203 ಗ್ರಾಂ ತೂಕ ಪಡೆದಿದೆ. ಜೊತೆಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 11 ಓಎಸ್‌, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.