ಇಂದು ರಿಯಲ್‌ಮಿ 8i ಸ್ಮಾರ್ಟ್‌ಫೋನ್ ಸೇಲ್‌; ಅಗ್ಗದ ಬೆಲೆ!

14-09-21 02:59 pm       Headline Karnataka News Network   ಡಿಜಿಟಲ್ ಟೆಕ್

ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ 8i ಫೋನ್ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಸೇಲ್ ಆರಂಭಿಸಲಿದೆ.

ರಿಯಲ್‌ ಮಿ ಮೊಬೈಲ್ ಸಂಸ್ಥೆಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ 8i ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಸೇಲ್ ಆರಂಭಿಸಲಿದೆ. ಇನ್ನು ರಿಯಲ್‌ಮಿ 8i ಸ್ಮಾರ್ಟ್‌ಫೋನಿನ 4GB RAM + 64GB ವೇರಿಯಂಟ್‌ನ ಆರಂಭಿಕ ಬೆಲೆಯು 13,999ರೂ. ಆಗಿದ್ದು, ಸೇಲ್‌ನಲ್ಲಿ ಆಫರ್‌ ಪಡೆದಿದೆ.

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ 8i ಸ್ಮಾರ್ಟ್‌ಫೋನ್ 4GB RAM + 64GB ಮತ್ತು 6GB RAM +128GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, 50 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G96 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.



ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಈ ಫೋನ್ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಸ್ಕ್ರೀನ್‌ ಮತ್ತು ಬಾಹ್ಯ ಬಾಡಿಯ ನಡುವಿನ ಅಂತರವು 90.8% ಆಗಿದೆ. ಹಾಗೆಯೇ ಡಿಸ್‌ಪ್ಲೇಯ ಪ್ರತಿ ಇಂಚಿನ ಸಾಂದ್ರತೆಯು 400 ppi ಆಗಿದೆ. 600 nits ಬ್ರೈಟ್ನೆಸ್‌ ಸೌಲಭ್ಯ ಪಡೆದಿದೆ.



ಪ್ರೊಸೆಸರ್‌ ಯಾವುದು

ರಿಯಲ್‌ಮಿ 8i ಸ್ಮಾರ್ಟ್‌ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G96 ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಈ ಫೋನ್ 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ವರ್ಚುವಲ್‌ RAM ಆಯ್ಕೆ ಸಹ ಇದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಅನ್ನು 256 GB ವರೆಗೂ ವಿಸ್ತರಿಸುವ ಆಯ್ಕೆ ನೀಡಿದೆ.



ಕ್ಯಾಮೆರಾ ಸೆನ್ಸಾರ್

ರಿಯಲ್‌ಮಿ 8i ಸ್ಮಾರ್ಟ್‌ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಎರಡು ಮತ್ತು ಮೂರನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿವೆ. ಹಾಗೆಯೇ 16 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಎಲ್‌ಇಡಿ ಫ್ಲ್ಯಾಶ್‌ ಆಯ್ಕೆಯನ್ನು ಒದಗಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌

ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಸಿ ಟೈಪ್ ಯುಎಸ್‌ಬಿ, ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್, ಅಕ್ಸೆಲೆರೊಮೀಟರ್, ಗೈರೋಮೀಟರ್ ಸೇರಿದಂತೆ ಇತ್ತೀಚಿನ ಆಯ್ಕೆಗಳನ್ನು ಪಡೆದಿದೆ.



ಬೆಲೆ ಎಷ್ಟು ಹಾಗೂ ಲಭ್ಯತೆ

ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳಲ್ಲಿ ಲಾಂಚ್ ಆಗಿದೆ. ಅವುಗಳಲ್ಲಿ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆಯು 13,999 ರೂ. ಆಗಿದೆ. ಅದೇ ರೀತಿ 6GB RAM +128GB ಸ್ಟೋರೇಜ್ ವೇರಿಯಂಟ್‌ ಬೆಲೆಯು 15,999 ರೂ. ಆಗಿದೆ. ಹೆಚ್‌ಡಿಎಫ್‌ಸಿ ಹಾಗೂ ಐಸಿಐಸಿಐ ಬ್ಯಾಂಕ್‌ಗಳ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೇ 1,000 ರೂ. ರಿಯಾಯಿತಿ ಲಭ್ಯವಾಗಲಿದೆ. ಹಾಗೆಯೇ ಇಎಮ್‌ಐ ಆಯ್ಕೆಗಳು ಸಿಗಲಿವೆ. ಇನ್ನು ಈ ಫೋನ್ ಬ್ಲ್ಯಾಕ್‌ ಮತ್ತು ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.