ಬ್ರೇಕಿಂಗ್ ನ್ಯೂಸ್
18-09-21 12:45 pm Source ; Drive Spark Kannada ಡಿಜಿಟಲ್ ಟೆಕ್
ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಕಾರು ಖರೀದಿ ಮೇಲೆ ಸೆಪ್ಟೆಂಬರ್ ಅವಧಿಗಾಗಿ ವಿವಿಧ ಆಫರ್‌ಗಳನ್ನು ಘೋಷಿಸಿದ್ದು, ಹೊಸ ಆಫರ್‌ಗಳಲ್ಲಿ ಕಂಪನಿಯು ವಿಶೇಷ ರಿಯಾಯ್ತಿಗಳನ್ನು ನೀಡುತ್ತಿದೆ.
ದೇಶಾದ್ಯಂತ ಆರಂಭವಾಗುತ್ತಿರುವ ಹಬ್ಬದ ಋತುವಿನಲ್ಲಿ ಗ್ರಾಹಕರ ಬೇಡಿಕೆ ಹೆಚ್ಚಳ ನೀರಿಕ್ಷೆಯೊಂದಿಗೆ ವಿವಿಧ ಕಾರು ಕಂಪನಿಗಳು ವಿವಿಧ ಆಫರ್‌ಗಳ ಮೂಲಕ ಮಾರಾಟ ಪ್ರಕ್ರಿಯೆ ಹೆಚ್ಚಿಸುತ್ತಿದ್ದು, ಟಾಟಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಟಿಯಾಗೊ, ಟಿಗೋರ್, ನೆಕ್ಸಾನ್, ಮತ್ತು ಹ್ಯಾರಿಯರ್ ಕಾರುಗಳ ಮೇಲೆ ವಿಶೇಷ ಆಫರ್ ನೀಡುತ್ತಿದೆ.
ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ.10 ಸಾವಿರದಿಂದ ಗರಿಷ್ಠ ರೂ.40 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.
ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ರೂ. 25 ಸಾವಿರ ಆಫರ್ ಘೋಷಿಸಲಾಗಿದ್ದು, ರೂ. 25 ಸಾವಿರದಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.
ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಟಿಗೋರ್ ಕಾರು ಖರೀದಿಯ ಮೇಲೂ ಗ್ರಾಹಕರು ರೂ.25 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.
ರೂ.25 ಸಾವಿರದಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತಿದ್ದು, ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ.
ಸದ್ಯ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.04 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.64 ಲಕ್ಷದಿಂದ ರೂ. 7.81 ಲಕ್ಷ ಬೆಲೆ ಹೊಂದಿದೆ.
ಇನ್ನು ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮಾದರಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡುತ್ತಿದ್ದು, ಹೊಸ ಆಫರ್ ನೆಕ್ಸಾನ್ ಡಾರ್ಕ್ ಎಡಿಷನ್ ಹೊರತುಪಡಿಸಿ ಇನ್ನುಳಿದ ಎಲ್ಲಾ ವೆರಿಯೆಂಟ್‌ಗಳಿಗೂ ಅನ್ವಯಿಸುತ್ತದೆ.
ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.28 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.23 ಲಕ್ಷ ಬೆಲೆ ಹೊಂದಿದೆ.
ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಗೊಳ್ಳುತ್ತಿದ್ದು, ಹೊಸ ಕಾರಿನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವ ಡಾರ್ಕ್ ಎಡಿಷನ್ ಉನ್ನತ ಮಾದರಿಯಾಗಿ ಮಾರಾಟಗೊಳ್ಳುತ್ತಿದೆ.
ಟಾಟಾ ಹೊಸ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡುತ್ತಿದ್ದು, ಹ್ಯಾರಿಯರ್ ಸ್ಟ್ಯಾಂಡರ್ಡ್ ಮಾದರಿಗಳ ಮೇಲೆ ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ಅನ್ವಯವಾಗಲಿದ್ದರೆ ಡಾರ್ಕ್ ಎಡಿಷನ್ ಮೇಲೆ ರೂ.20 ಸಾವಿರ ಮಾತ್ರ ಎಕ್ಸ್‌ಚೆಂಜ್ ಆಫರ್ ಲಭ್ಯವಿದೆ.
ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ, ಆಲ್‌ಟ್ರೊಜ್, ಟಿಯಾಗೋ ಎನ್ಆರ್‌ಜಿ, ನೆಕ್ಸಾನ್ ಇವಿ ಆವೃತ್ತಿಗಳ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲವಾದರೂ ಡೀಲರ್ಸ್ ಮಟ್ಟದಲ್ಲಿ ವಿವಿಧ ಆಫರ್‌ಗಳು ಲಭ್ಯವಿದ್ದು, ಹೊಸ ಕಾರುಗಳ ಬೇಡಿಕೆಗೆ ಅನುಗುಣವಾಗಿ ಟಾಟಾ ಕಂಪನಿಯು ಇದೀಗ ಮತ್ತಷ್ಟು ಹೊಸ ಶೋರೂಂಗಳಿಗೆ ಚಾಲನೆ ನೀಡಿದೆ.
ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದು ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ. ಹೀಗಾಗಿ ಗ್ರಾಹಕರ ಬೇಡಿಕೆ ಪೂರೈಕೆ ಸಹಕಾರಿಯಾಗುವಂತೆ ಮಾರಾಟ ಮಳಿಗೆಗಳು ಮತ್ತು ಸೇವಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ.
ದೇಶಾದ್ಯಂತ ಹರಡಿಕೊಂಡಿರುವ 980 ಟಾಟಾ ಶೋರೂಂಗಳಲ್ಲಿ 272 ಶೋರೂಂಗಳು ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಂಪನಿಯ ಕಾರು ಮಾರಾಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದಲೇ ಶೇ. 28ರಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.
ಕಾರುಗಳ ಮಾರಾಟದಲ್ಲಿನ ವಾರ್ಷಿಕ ಬೆಳವಣಿಗೆಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕಳೆದ 9 ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರು ಮಾದರಿಗಳು ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡಲಿವೆ.
Tata motors is having a festive offer in September, save upto Rs 40000.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm