ಬ್ರೇಕಿಂಗ್ ನ್ಯೂಸ್
19-09-21 10:49 am Gizbot, Mutthuraju H M ಡಿಜಿಟಲ್ ಟೆಕ್
ಕೇಂದ್ರ ಹಣಕಾಸು ಸಚಿವಾಲಯ ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್ ಲಿಂಕ್ ಮಾಡಲು ನೀಡಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದೆ. ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಸೆಪ್ಟೆಂಬರ್ 30, 2021ಕ್ಕೆ ಗಡುವು ನೀಡಲಾಗಿತ್ತು. ಆದರೆ ಇದೀಗ ಈ ಗಡುವನ್ನು ಇನ್ನೂ ಆರು ತಿಂಗಳು ವಿಸ್ತರಿಸಲಾಗಿದೆ. ಅಂದರೆ ಮಾರ್ಚ್ 31, 2022ರ ವರೆಗೆ ನೀವು ನಿಮ್ಮ ಪ್ಯಾನ್ ಅನ್ನು ನಿಮ್ಮ ಆಧಾರ್ ಲಿಂಕ್ ಮಾಡಲು ಅವಕಾಶವಿದೆ.
ಹೌದು, ಕೇಂದ್ರ ಸರ್ಕಾರ ಮತ್ತೆ ಆಧಾರ್ ಕಾರ್ಡ್ ಪ್ಯಾನ್ ಲಿಂಕ್ ಮಾಡಲು ಅವಧಿಯನ್ನು ವಿಸ್ತರಣೆ ಮಾಡಿದೆ. ಈಗಾಗಲೇ ಮೂರ್ನಾಲ್ಕು ಭಾರಿ ಅವಧಿ ವಿಸ್ತರಣೆ ಮಾಡಿರುವ ಸರ್ಕಾರ ಇದೀಗ ಮತ್ತೊಂದು ಅವಧಿ ವಿಸ್ತರಣೆ ಮಾಡಿದೆ. ಇನ್ನು ತೆರಿಗೆಗಳ ಲೆಕ್ಕದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ಆಧಾರ್ ಪ್ಯಾನ್ ಲಿಂಕ್ ಅನಿವಾರ್ಯ ಹಾಗೂ ಕಡ್ಡಾಯವಾಗಿದೆ. ಇದೇ ಕಾರಣಕ್ಕೆ ಸರ್ಕಾರ ದೇಶದ ನಾಗರಿಕರಿಗೆ ಅವಕಾಶವನ್ನು ನೀಡುತ್ತಲೇ ಬಂದಿದೆ. ಹಾಗಾದ್ರೆ ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡುವುದಕ್ಕೆ ನೀವು ಏನು ಮಾಡಬೇಕು? ನಿಮ್ಮ ಕಾರ್ಡ್ ಲಿಂಕ್ ಆಗಿದೆಯಾ ಅನ್ನೊದನ್ನ ತಿಳಿಯೋದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಪ್ಯಾನ್ ಅನ್ನು ಆಧಾರ್ ಜೊತೆ ಲಿಂಕ್ ಮಾಡುವುದು ಹೇಗೆ?
ಇನ್ನು ನೀವು ಪ್ಯಾನ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಪ್ಯಾನ್ ‘ನಿಷ್ಕ್ರಿಯ' ಆಗುತ್ತದೆ. ಪ್ಯಾನ್ ನಿಷ್ಕ್ರಿಯಗೊಂಡ ನಂತರ, ಒಬ್ಬರು ಹಲವಾರು ವಹಿವಾಟುಗಳಿಗೆ ಒಳಗಾಗಲು ಸಾಧ್ಯವಾಗುವುದಿಲ್ಲ, ಅಲ್ಲಿ ಪ್ಯಾನ್ ಅನ್ನು ಕಡ್ಡಾಯವಾಗಿ ಉಲ್ಲೇಖಿಸಬೇಕಾಗುತ್ತದೆ. ಆದರಿಂದ ನೀವು ಕೂಡ ಪ್ಯಾನ್ ಅನ್ನು ಆಧಾರ್ ಜೊತೆಗೆ ಲಿಂಕ್ ಮಾಡಿಸುವುದು ಉತ್ತಮ. ಇನ್ನು ಪ್ಯಾನ್ ಅನ್ನು ಆಧಾರ್ ಜೊತೆ ಲಿಂಕ್ ಮಾಡುವುದಕ್ಕೆ ಎರಡು ಮಾರ್ಗಗಳಿವೆ. ಮೊದಲನೆಯದಾಗಿ ಎಸ್‌ಎಂಎಸ್ ಸೇವೆಯ ಮೂಲಕ, ಹಾಗೂ ಎರಡನೇಯದಾಗಿ ಆನ್‌ಲೈನ್‌ನಲ್ಲಿ ಆದಾಯ ತೆರಿಗೆ ತಾಣಕ್ಕೆ ಹೋಗಿ ಅಲ್ಲಿನ ಕ್ರಮಗಳನ್ನು ಅನುಸರಿಸುವ ಮೂಲಕ ಮಾಡಬಹುದಾಗಿದೆ.
SMS ಮೂಲಕ ಆಧಾರ್ ಮತ್ತು PAN ಅನ್ನು ಲಿಂಕ್ ಮಾಡುವುದು ಹೇಗೆ
ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡುವುದಕ್ಕೆ ಇರುವ ಸರಳ ಮಾರ್ಗ ಇದಾಗಿದೆ. ಆದಾಯ ತೆರಿಗೆ ಇಲಾಖೆಯು ತೆರಿಗೆದಾರರಿಗೆ ಎಸ್‌ಎಂಎಸ್ ಆಧಾರಿತ ಸೌಲಭ್ಯದ ಮೂಲಕ ಆಧಾರ್ ಮತ್ತು ಪ್ಯಾನ್ ಎರಡನ್ನು ಲಿಂಕ್ ಮಾಡುವುದಕ್ಕೆ ಅವಕಾಶ ನೀಡಿದೆ. ಇದಕ್ಕಾಗಿ ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ UIDPAN <ಸ್ಥಳ> ಟೈಪ್ ಮಾಡಿ 567678 ಅಥವಾ 56161 ಸಂಖ್ಯೆಗೆ ಎಸ್ ಎಂಎಸ್ ಕಳುಹಿಸಿ. ಒಮ್ಮೆ ನೀವು ಎಸ್‌ಎಂಎಸ್ ಕಳುಹಿಸಿದರೆ, ನಿಮ್ಮ ಆಧಾರ್ ಮತ್ತು ಪ್ಯಾನ್ ಲಿಂಕ್ ಆಗುತ್ತದೆ.
SMS ಮೂಲಕ ಆಧಾರ್ ಮತ್ತು PAN ಅನ್ನು ಲಿಂಕ್ ಮಾಡುವುದು ಹೇಗೆ
ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡುವುದಕ್ಕೆ ಇರುವ ಸರಳ ಮಾರ್ಗ ಇದಾಗಿದೆ. ಆದಾಯ ತೆರಿಗೆ ಇಲಾಖೆಯು ತೆರಿಗೆದಾರರಿಗೆ ಎಸ್‌ಎಂಎಸ್ ಆಧಾರಿತ ಸೌಲಭ್ಯದ ಮೂಲಕ ಆಧಾರ್ ಮತ್ತು ಪ್ಯಾನ್ ಎರಡನ್ನು ಲಿಂಕ್ ಮಾಡುವುದಕ್ಕೆ ಅವಕಾಶ ನೀಡಿದೆ. ಇದಕ್ಕಾಗಿ ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ UIDPAN <ಸ್ಥಳ> ಟೈಪ್ ಮಾಡಿ 567678 ಅಥವಾ 56161 ಸಂಖ್ಯೆಗೆ ಎಸ್ ಎಂಎಸ್ ಕಳುಹಿಸಿ. ಒಮ್ಮೆ ನೀವು ಎಸ್‌ಎಂಎಸ್ ಕಳುಹಿಸಿದರೆ, ನಿಮ್ಮ ಆಧಾರ್ ಮತ್ತು ಪ್ಯಾನ್ ಲಿಂಕ್ ಆಗುತ್ತದೆ.
ಆಧಾರ್-ಪ್ಯಾನ್ ಕಾರ್ಡ್ ಲಿಂಕ್ ಆಗಿರುವುದನ್ನು ಪರಿಶೀಲಿಸುವುದು ಹೇಗೆ?
ಹಂತ 1: ಆದಾಯ ತೆರಿಗೆ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಆಧಾರ್ ಸ್ಟೇಟಸ್‌ಗೆ ಹೋಗಿ ಅಥವಾ incometaxindiaefiling.gov.in/aadhaarstatus ಕ್ಲಿಕ್ ಮಾಡಿ
ಹಂತ 2: ಪ್ಯಾನ್ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ
ಹಂತ 3: 'ವ್ಯೂ ಲಿಂಕ್ ಆಧಾರ್ ಸ್ಟೇಟಸ್' ಕ್ಲಿಕ್ ಮಾಡಿ
ಹಂತ 4: ಲಿಂಕ್ ಆಗಿದೆಯಾ ಇಲ್ಲವಾ ಅನ್ನುವ ಸ್ಟೇಟಸ್ ಡಿಸ್‌ಪ್ಲೇ ಆಗಲಿದೆ.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 03:07 pm
Mangalore Correspondent
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm