ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!

22-09-21 10:57 am       Gizbot, Mantesh   ಡಿಜಿಟಲ್ ಟೆಕ್

ಸ್ಯಾಮ್‌ಸಂಗ್ ಕಂಪನಿಯು F ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಈಗ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯವಿದೆ.

ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಬಜೆಟ್‌ ದರದಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ಮುಖ್ಯವಾಗಿ ಗ್ಯಾಲಕ್ಸಿ M, ಗ್ಯಾಲಕ್ಸಿ F ಮತ್ತು ಗ್ಯಾಲಕ್ಸಿ A ಸರಣಿಯಲ್ಲಿ ಅತ್ಯುತ್ತಮ ಫೀಚರ್ಸ್‌ಗಳ ಫೋನ್‌ ಲಾಂಚ್ ಮಾಡಿದೆ. ಆ ಪೈಕಿ F ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಈಗ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯವಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಈಗ ಭಾರೀ ರಿಯಾಯಿತಿ ಪಡೆದಿದೆ. ಈ ಫೋನ್ 4GB RAM + 128GB ಸ್ಟೋರೇಜ್ ವೇರಿಯಂಟ್‌ ಮತ್ತು 6GB RAM + 128GB ವೇರಿಯಂಟ್‌ ಆಯ್ಕೆ ಹೊಂದಿದ್ದು, ಈ ಎರಡು ವೇರಿಯಂಟ್‌ಗಳಲ್ಲಿಯೂ 2,000ರೂ, ಡಿಸ್ಕೌಂಟ್‌ ತಿಳಿಸಿದೆ. ಹೀಗಾಗಿ ಆರಂಭಿಕ ವೇರಿಯಂಟ್ ಈಗ 12,999ರೂ.ಗಳಿಗೆ ಸಿಗಲಿದೆ. ಈ ಕೊಡುಗೆಯು ಸ್ಯಾಮ್‌ಸಂಗ್ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೇ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳು ಹೇಗಿವೆ ಮತ್ತು ಕೊಡುಗೆಯ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ 700 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಸ್ಯಾಮೋಲ್ಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಬಲ ಯಾವುದು

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಒನ್ ಯುಐ 3.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 128GB ಸ್ಟೋರೇಜ್, 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಆದಾಗ್ಯೂ, ಸ್ಯಾಮ್‌ಸಂಗ್ ಬಾಕ್ಸ್ ಒಳಗೆ 15W ಚಾರ್ಜರ್ ಅನ್ನು ಬಂಡಲ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ಬ್ಲೂಟೂತ್ ವಿ 5, ಎನ್ಎಫ್‌ಸಿ ಯನ್ನು ಹೊಂದಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸರ್ ಮತ್ತು ಫೇಸ್ ಅನ್ಲಾಕ್ ಬೆಂಬಲವಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಆದಾಗ್ಯೂ, ಸ್ಯಾಮ್‌ಸಂಗ್ ಬಾಕ್ಸ್ ಒಳಗೆ 15W ಚಾರ್ಜರ್ ಅನ್ನು ಬಂಡಲ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ಬ್ಲೂಟೂತ್ ವಿ 5, ಎನ್ಎಫ್‌ಸಿ ಯನ್ನು ಹೊಂದಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸರ್ ಮತ್ತು ಫೇಸ್ ಅನ್ಲಾಕ್ ಬೆಂಬಲವಿದೆ.