ಬ್ರೇಕಿಂಗ್ ನ್ಯೂಸ್
01-10-21 03:42 pm Gizbot, Mutthuraju H M ಡಿಜಿಟಲ್ ಟೆಕ್
ಮೊಟೊರೊಲಾ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕರಲ್ಲಿ ಒಂದೆನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಪಂಚ್ ಹೋಲ್ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿದ್ದು, 144Hz AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ಹೌದು, ಮೊಟೊರೊಲಾ ಕಂಪೆನಿ ಭಾರತದ ಮಾರುಕಟ್ಟೆಗೆ ಹೊಸ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್ ಬಲವನ್ನು ಹೊಂದಿದ್ದು, 5G ಬೆಂಬಲಿಸಲಿದೆ. ಜೊತೆಗೆ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ವೇಗದ ಚಾರ್ಜಿಂಗ್ ಬೆಂಬಲ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಫುಲ್-HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ AMOLED ಡಿಸ್‌ಪ್ಲೇ ಆಗಿದ್ದು, 144Hz ರಿಫ್ರೆಶ್ ರೇಟ್ ಹೊಂದಿದೆ. ಇದು 576Hz ಟಚ್ ಸೆನ್ಸಾರ್ ಅನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲವನ್ನು ಹೊಂದಿದ್ದು, 2.5D ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ.
ಪ್ರೊಸೆಸರ್
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಮೈ UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಫೋನ್ 8GB RAM + 128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.1, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ. ಇದರ ಜೊತೆಗೆ ಪವರ್ ಬಟನ್ ಅಡಿಯಲ್ಲಿ ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಫೋನ್ ಹೊಂದಿದೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಏಕೈಕ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 36,999ರೂ ಬೆಲೆ ಹೊಂದಿದೆ. ಇನ್ನು ಈ ಫೋನ್ ಮಿಡ್‌ನೈಟ್ ಸ್ಕೈ ಮತ್ತು ಐರಿಡೆಸೆಂಟ್ ಕ್ಲೌಡ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಭಾನುವಾರ, ಅಕ್ಟೋಬರ್ 3 ರಿಂದ ಪ್ರಿ-ಆರ್ಡರ್ ಸ್ವೀಕರಿಸಲು ಪ್ರಾರಂಭಿಸುತ್ತದೆ. ಇನ್ನು ಈ ಲಾಂಚ್ ಆಫರ್‌ನಲ್ಲಿ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಡಿಸ್ಕೌಂಟ್‌ನಲ್ಲಿ ದೊರೆಯಲಿದೆ. ಜೊತೆಗೆ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಆಕ್ಸಿಸ್ ಮತ್ತು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳ ಮೇಲೆ 10% ರಿಯಾಯಿತಿ ಒಳಗೊಂಡಿದೆ. ಐಸಿಐಸಿಐ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಆರು ತಿಂಗಳವರೆಗೆ ನೋ ಕಾಸ್ಟ್ ಇಎಂಐ ಆಯ್ಕೆಗಳು ಇರುತ್ತದೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm