ಬ್ರೇಕಿಂಗ್ ನ್ಯೂಸ್
04-10-21 02:31 pm Gizbot, Mantesh ಡಿಜಿಟಲ್ ಟೆಕ್
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ 'ಮೊಟೊರೊಲಾ ಎಡ್ಜ್ 20 ಪ್ರೊ' ಸ್ಮಾರ್ಟ್‌ಫೋನ್ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಹೈ ಎಂಡ್ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡದೆ. ಮುಖ್ಯವಾಗಿ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಹಾಗೂ ಟ್ರಿಪಲ್ ಕ್ಯಾಮೆರಾ ಆಯ್ಕೆ ಪ್ಲಸ್ ಪಾಯಿಂಟ್ ಆಗಿದೆ.
ಹೌದು, ಮೊಟೊರೊಲಾ ಕಂಪೆನಿ ನೂತನ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಟ್ರೆಂಡಿ ಲುಕ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 4,500mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್ ಆಗಿದೆ. ಹಾಗಾದರೇ ಹೊಸ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಫಸ್ಟ್ ಲುಕ್ ಹೇಗಿದೆ?..ಈ ಫೋನಿನ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಫುಲ್-HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ AMOLED ಡಿಸ್‌ಪ್ಲೇ ಆಗಿದ್ದು, 144Hz ರಿಫ್ರೆಶ್ ರೇಟ್ ಹೊಂದಿದೆ. ಇದು 576Hz ಟಚ್ ಸೆನ್ಸಾರ್ ಅನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲವನ್ನು ಹೊಂದಿದ್ದು, 2.5D ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ. ತನ್ನ ವರ್ಗದಲ್ಲಿಯೇ ಉತ್ತಮ ಡಿಸ್‌ಪ್ಲೇ ರೆಸಲ್ಯೂಶ್ ಹೊಂದಿದ್ದು, ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.
ಪ್ರೊಸೆಸರ್ ಬಲ ಯಾವುದು
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಮೈ UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಫೋನ್ 8GB RAM + 128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ. 8K ವೀಡಿಯೋ ರೆಕಾರ್ಡಿಂಗ್, ವೀಡಿಯೋ ಎಡಿಟಿಂಗ್ ಮತ್ತು ಮಲ್ಟಿಟಾಸ್ಕಿಂಗ್ ಸೇರಿದಂತೆ ಎಲ್ಲಾ ಮೂಲಭೂತ ಮತ್ತು ಉನ್ನತ ಮಟ್ಟದ ಕಾರ್ಯಗಳಿಗಾಗಿ ಈ ಡಿವೈಸ್ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ.
ಕ್ಯಾಮೆರಾ ಸೆನ್ಸಾರ್ ವಿಶೇಷ
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, f/1.9 ಲೆನ್ಸ್ ಹೊಂದಿದೆ. ಹಾಗೆಯೇ ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಮೀಡ್‌ರೇಂಜ್ ದರದಲ್ಲಿ ಅತ್ಯುತ್ತಮ ಕ್ಯಾಮೆರಾ ಸೆನ್ಸಾರ್ ಪಡೆದಿರುವುದು ಕ್ಯಾಮೆರಾ ಪ್ರಿಯರನ್ನು ಸೆಳೆಯಲಿದೆ.
ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.1, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ. ಇದರ ಜೊತೆಗೆ ಪವರ್ ಬಟನ್ ಅಡಿಯಲ್ಲಿ ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಫೋನ್ ಹೊಂದಿದೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಏಕೈಕ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಈ ವೇರಿಯಂಟ್ ಬೆಲೆಯು 36,999ರೂ.ಗಳ ಬೆಲೆ ಹೊಂದಿದೆ. ಇನ್ನು ಈ ಫೋನ್ ಮಿಡ್‌ನೈಟ್ ಸ್ಕೈ ಮತ್ತು ಐರಿಡೆಸೆಂಟ್ ಕ್ಲೌಡ್ ಕಲರ್ ಆಯ್ಕೆಗಳನ್ನು ಪಡೆದಿದೆ.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm