ಬ್ರೇಕಿಂಗ್ ನ್ಯೂಸ್
09-12-21 05:27 pm Source: Gizbot Kannada ಡಿಜಿಟಲ್ ಟೆಕ್
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಗ್ರಾಹಕರನ್ನು ಸೆಳೆಯಲು ಒಂದಿಲ್ಲೊಂದು ಆಫರ್ ಘೋಷಿಸುತ್ತದೆ. ಮುಖ್ಯವಾಗಿ ಹಬ್ಬದ ದಿನಗಳಲ್ಲಿ ದೊಡ್ಡ ರಿಯಾಯಿತಿ ಘೋಷಿಸುತ್ತದೆ. ಇನ್ನು ಕೆಲವೊಮ್ಮೆ ಹಬ್ಬದ ಸೇಲ್ ಇಲ್ಲದಿದ್ದಾಗೂ ಕೆಲವೊಂದು ಆಯ್ದ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ನೀಡುತ್ತದೆ. ಅಮೆಜಾನ್ ತಾಣದಲ್ಲಿ ಬಜೆಟ್ ದರದ ಫೋನ್‌ಗಳಿಂದ ಹಿಡಿದು ಹೈ ಎಂಡ್ ಮಾದರಿಯ ಫೋನ್‌ಗಳು ರಿಯಾಯಿತಿಯಲ್ಲಿ ಲಭ್ಯ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳ ಹೊಸದಾಗಿ ಬಿಡುಗಡೆ ಆಗಿರುವ ಹಾಗೂ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಅಲ್ಲದೇ ಅತ್ಯುತ್ತಮ ಡಿಸ್‌ಪ್ಲೇ ಫೋನ್‌ಗಳು, 5G ಫೋನ್‌ಗಳು, ಬೆಸ್ಟ್ ಕ್ಯಾಮೆರಾ ಫೋನ್‌ಗಳಿಗೂ ಬೊಂಬಾಟ್ ಕೊಡುಗೆ ಲಭ್ಯ ಇರುತ್ತದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಡಿಸ್‌ಪ್ಲೇಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ರೆಡ್ಮಿ ನೋಟ್ 10S ಫೋನ
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್ ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಈ ಫೋನ್ 4,500mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಅದಕ್ಕೆ ಪೂರಕವಾಗಿ 30W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್ ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್ ನೈಟ್, ಗ್ಲಾಸಿಲ್ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ.
Amazon Great Indian Festival 2021 sale is currently ongoing, and is offering deals, discounts, and offers on various mobile phones. Customers can get options from companies including Apple, Samsung, and Xiaomi during the Amazon sale at discounted prices.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am