ಬ್ರೇಕಿಂಗ್ ನ್ಯೂಸ್
26-12-21 12:05 pm Source: Gizbot Kannada ಡಿಜಿಟಲ್ ಟೆಕ್
ಟೆಕ್ ವಲಯದಲ್ಲಿ ವಿವೋ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಹೊಸ ವಿವೋ V23 5G ಸರಣಿಯನ್ನು ಭಾರತದಲ್ಲಿ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸರಣಿ ಮುಂದಿನ ವರ್ಷ ಅಂದರೆ ಜನವರಿ 5 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ದೃಢಪಡಿಸಲಾಗಿದೆ.
ಹೌದು, ವಿವೋ ಕಂಪೆನಿ ಹೊಸ ವಿವೋ V23 5G ಸರಣಿಯ ಬಿಡುಗಡೆ ದಿನಾಂಕವನ್ನು ಬಹಿರಂಗ ಪಡಿಸಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಈಗ ಅಧಿಕೃತ ವೆಬ್‌ಸೈಟ್‌ನಲ್ಲಿ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಲೈವ್ ಆಗಿದೆ. ಇನ್ನು ಈ ಸರಣಿಯಲ್ಲಿ ವಿವೋ ಯಾವ ಸ್ಮಾರ್ಟ್‌ಫೋನ್‌ಗಳನ್ನು ಪ್ರಾರಂಭಿಸುತ್ತದೆ ಎಂಬುದನ್ನು ದೃಢಪಡಿಸಿಲ್ಲ. ಆದರೆ ಈ ಸರಣಿಯಲ್ಲಿ ವಿವೋ V23 5G ಶ್ರೇಣಿಯು ಎರಡು ಮಾದರಿಗಳನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ. ಹಾಗಾದ್ರೆ ವಿವೋ V23 5G ಸರಣಿಯ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ವಿವೋ V23 5G ಡಿಸ್‌ಪ್ಲೇ
ವಿವೋ V23 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 87.98% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದಿದೆ.
ವಿವೋ V23 5G ಪ್ರೊಸೆಸರ್
ವಿವೋ V23 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 5G SoC ಪ್ರೊಸೆಸರ್ ಬಲವನ್ನು ಹೊಂದಿರಲಿದೆ ಎಂದು ಮೈಕ್ರೋಸೈಟ್ ಉಲ್ಲೇಖಿಸಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಬಲವನ್ನು ಪಡೆದುಕೊಂಡಿದೆ.
ವಿವೋ V23 5G ಕ್ಯಾಮೆರಾ
ವಿವೋ V23 5G ಸರಣಿಯ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇತರ ಲೆನ್ಸ್‌ಗಳು ಸೂಪರ್-ವೈಡ್-ಆಂಗಲ್ ಸೆನ್ಸಾರ್ ಮತ್ತು ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿವೆ. ಇದಲ್ಲದೆ ಮುಂಭಾಗದಲ್ಲಿ, 50-ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಡ್ಯುಯಲ್ ಸೆಲ್ಫಿ ಕ್ಯಾಮೆರಾಗಳನ್ನು ಸಹ ಹೊಂದಿದೆ. ಇವುಗಳು ನೈಟ್ ಮೋಡ್ ಬೆಂಬಲದೊಂದಿಗೆ ಸೂಪರ್-ವೈಡ್-ಆಂಗಲ್ ಸೆನ್ಸಾರ್ ಅನ್ನು ಸಹ ಪಡೆಯುತ್ತವೆ.
ವಿವೋ V23 5G ಬ್ಯಾಟರಿ
ವಿವೋ V23 5G ಸ್ಮಾರ್ಟ್‌ಫೋನ್ 4200 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಬ್ಯಾಟರಿ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ ಹೇಗಿರಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಸ್ಮಾರ್ಟ್‌ಫೋನ್ ಸನ್‌ಶೈನ್ ಗೋಲ್ಡ್ ಬಣ್ಣ ಆಯ್ಕೆಗೆ ಬಣ್ಣ ಬದಲಾಯಿಸುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಚೈನೀಸ್ ಬ್ರ್ಯಾಂಡ್ ಮೈಕ್ರೋಸೈಟ್‌ನಲ್ಲಿ ಉಲ್ಲೇಖಿಸಿದೆ.
Vivo V23 5G series has been confirmed to launch in India on January 5.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm