ಬ್ರೇಕಿಂಗ್ ನ್ಯೂಸ್
07-04-22 09:31 pm Source: Vijayakarnataka ಡಿಜಿಟಲ್ ಟೆಕ್
ಭಾರತದ ಮೊಬೈಲ್ ಮಾರುಕಟ್ಟೆಯು ಬಹುನಿರೀಕ್ಷೆಯಿಂದ ಎದುರುನೋಡುತ್ತಿದ್ದ Realme GT 2 Pro ಫ್ರೀಮಿಯಂ ಫ್ಲಾಗ್‌ಶಿಪ್ ಸ್ಮಾರ್ಟ್‌ಫೋನ್ ಅನ್ನು ದೇಶದಲ್ಲಿಂದು (ಗುರುವಾರ, ಏಪ್ರಿಲ್ 7) ಬಿಡುಗಡೆಗೊಳಿಸಲಾಗಿದೆ. ಕಳೆದ ಜನವರಿಯಲ್ಲಿ ಚೀನಾದಲ್ಲಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ ಯುರೋಪ್ ಮಾರುಕಟ್ಟೆಗಳಲ್ಲಿ ಪರಿಚಯಿಸಲಾಗಿದ್ದ ಅದೇ ಫೀಚರ್ಸ್‌ಗಳೊಂದಿಗೆ ದೇಶದಲ್ಲಿಯೂ Realme GT 2 Pro ಸ್ಮಾರ್ಟ್‌ಫೋನ್ ಬಿಡುಗಡೆಗೊಂಡಿದ್ದು, ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಮತ್ತು LTPO 2.0-ಬೆಂಬಲಿತ 'ಸೂಪರ್ ರಿಯಾಲಿಟಿ' ಡಿಸ್‌ಪ್ಲೇಯಂತಹ ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತು ಕೇವಲ 44,999 ರೂ.ಗಳ ಆರಂಭಕ ಬೆಲೆಯಲ್ಲಿ ದೇಶದ ಮಾರುಕಟ್ಟೆಗೆ ಆಗಮಿಸಿದೆ. ಇನ್ನು HDFC ಬ್ಯಾಂಕ್ ಮತ್ತು SBI ಬ್ಯಾಂಕ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳ ಮೇಲೆ 5,000 ರೂ.ಗಳ ಭಾರೀ ಇನ್‌ಸ್ಟಂಟ್ ರಿಯಾಯಿತಿಯೊಂದಿಗೆ ಇದೇ ಏಪ್ರಿಲ್ 14 ರಂದು ಮಧ್ಯಾಹ್ನ 12 ಗಂಟೆಗೆ Realme GT 2 Pro ಸ್ಮಾರ್ಟ್‌ಫೋನ್ ಮಾರಾಟಕ್ಕೆ ಬರಲಿದೆ ಎಂದು ಕಂಪೆನಿ ತಿಳಿಸಿದೆ.
ಭಾರತದಲ್ಲಿ ಇದೀಗ ಬಿಡುಗಡೆಗೊಂಡಿರುವ ನೂತನ Realme GT 2 Pro ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳನ್ನು ನೋಡುವುದಾದರೆ, ಡ್ಯುಯಲ್-ಸಿಮ್ ಸಾಮರ್ಥ್ಯದ Realme GT 2 Pro ಸ್ಮಾರ್ಟ್‌ಫೋನ್ Android 12-ಆಧಾರಿತ Realme UI 3.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ರಿಯಲ್‌ಮಿ ಕಂಪೆನಿ ತಿಳಿಸಿದೆ. 6.7-ಇಂಚಿನ 2K (1,440x3,216 ಪಿಕ್ಸೆಲ್‌ಗಳು) LTPO 2.0 AMOLED ಡಿಸ್‌ಪ್ಲೇಯು 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಸ್ಕ್ರೀನ್ ರಕ್ಷಣೆಯನ್ನು ಹೊಂದಿದೆ. ಇತ್ತೀಚಿನ ಸ್ನಾಪ್‌ಡ್ರಾಗನ್ 8 Gen 1 SoC ನಿಂದ ಚಾಲಿತವಾಗಿರುವ Realme GT 2 Pro ಸ್ಮಾರ್ಟ್‌ಫೋನನ್ನು 12GB ಯ RAM ನೊಂದಿಗೆ ಜೋಡಿಸಲಾಗಿದ್ದು, ಈ ಫೋನ್ 512GB ವರೆಗೆ ಅಂತರ್ಗತ ಸಂಗ್ರಹಣೆಯನ್ನು ಸಹ ಹೊಂದಿದೆ. ಇನ್ನು Realme GT 2 Pro ಸ್ಮಾರ್ಟ್‌ಫೋನಿನಲ್ಲಿ 5,000mAh ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ ಎಂದು ಕಂಪೆನಿ ಹೇಳಿದೆ.
ನೂತನ Realme GT 2 Pro ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಸಾಮರ್ಥ್ಯದಲ್ಲಿ, 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾದ ಜೊತೆಗೆ 50-ಮೆಗಾಪಿಕ್ಸೆಲ್ ಸೋನಿ IMX766 ಪ್ರಾಥಮಿಕ ಸಂವೇದಕ ಹಾಗೂ 50-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾಗಳನ್ನು ಸ್ಮಾರ್ಟ್‌ಪೋನ್ ಒಳಗೊಂಡಿದೆ. ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಫೋನಿನ ಮುಂಭಾಗದಲ್ಲಿ 32-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಿರುವುದನ್ನು ನಾವು ನೋಡಬಹುದು. Realme GT 2 Pro ಸ್ಮಾರ್ಟ್‌ಫೋನಿನ ಸಂಪರ್ಕ ಆಯ್ಕೆಗಳಲ್ಲಿ 5G (10-ಗಿಗಾಬಿಟ್), 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸಂವೇದಕವನ್ನು ಹೊಂದಿರುವ ಈ ಸ್ಮಾರ್ಟ್‌ಫೋನಿನಲ್ಲಿ ಸ್ಟೇನ್‌ಲೆಸ್ ಸ್ಟೀಲ್ ಆವಿ ಕೂಲಿಂಗ್ ಮ್ಯಾಕ್ಸ್ ವೈಶಿಷ್ಟ್ಯವನ್ನು ಕೂಲಿಂಗ್‌ಗಾಗಿ ತರಲಾಗಿದೆ.
ಭಾರತದಲ್ಲಿ Realme GT 2 Pro ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಗಳು 49,999 ರೂ.ಗಳಿಂದ ಆರಂಭವಾಗಿದೆ. 8GB + 128GB ಸ್ಟೋರೇಜ್ ಮಾದರಿ ಫೋನ್ ಬೆಲೆ 49,999 ರೂ.ಗಳಾದರೆ, 12GB + 256GB ಸ್ಟೋರೇಜ್ ಆಯ್ಕೆಯ ಫೋನ್ ಬೆಲೆಯು 57,999 ರೂ.ಗಲಾಗಿವೆ. ಆದರೆ, ಪರಿಚಯಾತ್ಮಕ ಕೊಡುಗೆಯಾಗಿ ಈ ಎರಡೂ ಸ್ಮಾರ್ಟ್‌ಫೋನ್‌ಗಳನ್ನು ಕ್ರಮವಾಗಿ 44,999 ಮತ್ತು 52,999 ರೂ.ಗಳಿಗೆ ಮಾರಾಟ ಮಾಡುವುದಾಗಿ ಕಂಪೆನಿ ಹೇಳಿದೆ. ಪೇಪರ್ ಗ್ರೀನ್, ಪೇಪರ್ ವೈಟ್ ಮತ್ತು ಸ್ಟೀಲ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರಲಿರುವ ಈ ಸ್ಮಾರ್ಟ್‌ಫೋನನ್ನು ಏಪ್ರಿಲ್ 14 ರಂದು ಮಧ್ಯಾಹ್ನ 12 ಗಂಟೆಗೆ Realme.com, Flipkart ಮತ್ತು ಚಿಲ್ಲರೆ ಅಂಗಡಿಗಳ ಮೂಲಕ ಮಾರಾಟ ಮಾಡಲಾಗುತ್ತಿದೆ. HDFC ಬ್ಯಾಂಕ್ ಮತ್ತು SBI ಬ್ಯಾಂಕ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳ ಮೇಲೆ 5,000 ತ್ವರಿತ ರಿಯಾಯಿತಿಯ ಜೊತೆಗೆ, Realme GT 2 Pro ಫೋನ್ ಖರೀದಿದಾರರಿಗೆ 4,999.ರೂ ಮೌಲ್ಯದ ರಿಯಲ್‌ಮಿ ವಾಚ್ ಎಸ್ ಸ್ಮಾರ್ಟ್‌ವಾಚ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಕಂಪೆನಿ ತಿಳಿಸಿದೆ.
Realme Gt 2 Pro Launched In India Price, Specifications Details.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm