ಬ್ರೇಕಿಂಗ್ ನ್ಯೂಸ್
14-05-22 08:10 pm Source: Vijayakarnataka ಡಿಜಿಟಲ್ ಟೆಕ್
ಜನಪ್ರಿಯ ಮೊಬೈಲ್ ಕಂಪೆನಿ ಮೊಟೊರೊಲಾ ತನ್ನ ವಿನೂತನ Moto G82 5G ಸ್ಮಾರ್ಟ್‌ಫೋನನ್ನು ಇಂದು ಮಾರುಕಟ್ಟೆಗೆ ಪರಿಚಯಿಸಿದೆ. ವಿಶ್ವ ಬಜೆಟ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯ ಮೇಲೆ ದೃಷ್ಟಿಯನ್ನಿಟ್ಟಿರುವು ಮೊಟೊರೊಲಾ ತನ್ನ ನೂತನ Moto G82 5G ಸ್ಮಾರ್ಟ್‌ಫೋನನ್ನು ಸಹ ಬಜೆಟ್ ಬೆಲೆಯಲ್ಲಿ ಬಿಡುಗಡೆ ಮಾಡಿದ್ದು, EUR 329.99 (26,600 ರೂ.) ಬೆಲೆಯಲ್ಲಿ 120Hz OLED ಡಿಸ್‌ಪ್ಲೇ, 50-ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು 30W ವೇಗದ ಚಾರ್ಜಿಂಗ್ ಬೆಂಬಲಗಳಂತಹ ವೈಶಿಷ್ಟ್ಯಗಳನ್ನು ತಂದಿದೆ. ಇದೀಗ ಆಯ್ದ ಯುರೋಪಿಯನ್ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಂಡಿರುವ Moto G82 5G ಸ್ಮಾರ್ಟ್‌ಫೋನನ್ನು ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ಆರಂಭದಲ್ಲಿ ಭಾರತದಲ್ಲಿಯೂ ಬಿಡುಗಡೆ ಮಾಡುವ ಭರವಸೆಯನ್ನು ನೀಡಲಾಗಿದೆ. ಈ ಬಗ್ಗೆ ಹೆಚ್ಚು ಮಾಹಿತಿಯನ್ನು ತಿಳಿಯೋಣ ಬನ್ನಿ.
ನಾವು ನೇರವಾಗಿ ನೂತನ Moto G82 5G ಸ್ಮಾರ್ಟ್‌ಫೋನಿನ ವೈಶಿಷ್ಟ್ಯಗಳನ್ನು ನೋಡುವುದಾದರೆ, ಭಾರತದಲ್ಲಿ ಇತ್ತೀಚಿಗಷ್ಟೇ ಬಿಡುಗಡೆಯಾಗಿರುವ Motorola Edge 30 ಸ್ಮಾರ್ಟ್‌ಫೋನಿನಲ್ಲಿ ಅಳವಡಿಸಲಾಗಿದ್ದ OLED ಪ್ಯಾನೆಲ್ ಅನ್ನೇ ಈ ನೂತನ Moto G82 5G ಸ್ಮಾರ್ಟ್‌ಫೋನಿನಲ್ಲಿಯೂ ಅಳವಡಿಸಲಾಗಿದೆ. ಈ Moto G82 5G ಸ್ಮಾರ್ಟ್‌ಫೋನ್ ಫುಲ್ HD+ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದೊಂದಿಗೆ 6.6-ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 100 ಪ್ರತಿಶತ DCI-P3 ಗ್ಯಾಮಟ್ ಕವರೇಜ್ ನೀಡುತ್ತದೆ ಎಂದು ಕಂಪೆನಿ ಹೇಳಿಕೊಂಡಿದೆ. ಹುಡ್ ಅಡಿಯಲ್ಲಿ, ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಅನ್ನು ಹೊಂದಿರುವ ಈ ಸ್ಮಾರ್ಟ್‌ಫೋನನ್ನು 6GB RAM ಮತ್ತು 128GB ಸಂಗ್ರಹಣೆಯೊಂದಿಗೆ (SD ಕಾರ್ಡ್ ಮೂಲಕ 1TB ವರೆಗೆ ವಿಸ್ತರಿಸಬಹುದಾದ) ಜೋಡಿಸಲಾಗಿದೆ.
ನೂತನ Moto G82 5G ಸ್ಮಾರ್ಟ್‌ಫೋನ್ ಮಾತ್ರೆ-ಆಕಾರದ ಕ್ಯಾಮೆರಾ ಮಾಡ್ಯೂಲ್ ಅನ್ನು ಒಳಗೊಂಡಿದ್ದು, ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಜೊತೆಗೆ 50-ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಸಂವೇದಕವನ್ನು ಹೊಂದಿದೆ. ಜೊತೆಗೆ 118-ಡಿಗ್ರಿ FoV ಮತ್ತು 2MP ಮ್ಯಾಕ್ರೋ ಸ್ನ್ಯಾಪರ್‌ನೊಂದಿಗೆ 8-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಸಂವೇದಕಗಳನ್ನು ಅಳವಡಿಸಲಾಗಿದೆ. 16-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೋಲ್-ಪಂಚ್ ವಿನ್ಯಾಸದಲ್ಲಿ ನೀಡಲಾಗಿದೆ. ಇನ್ನು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ Moto G82 5G ಸ್ಮಾರ್ಟ್‌ಫೋನ್ 30W ವರೆಗಿನ ವೇಗದ ಚಾರ್ಜಿಂಗ್ ಬೆಂಲವನ್ನು ಹೊಂದಿದೆ. ಹೆಸರೇ ಸೂಚಿಸುವಂತೆ, ಈ ಫೋನ್ 5G ಅನ್ನು ಬೆಂಬಲಿಸುತ್ತದೆ ಮತ್ತು ಥಿಂಕ್‌ಶೀಲ್ಡ್ ಭದ್ರತೆಯೊಂದಿಗೆ ಕ್ಲೀನ್ ಆಂಡ್ರಾಯ್ಡ್ 12 ನಲ್ಲಿ ಕೆಲಸ ಕಾರ್ಯನಿರ್ವಹಿಸಲಿದೆ.
Moto G82 5G ಸ್ಮಾರ್ಟ್‌ಫೋನಿನಲ್ಲಿ 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಅಳವಡಿಸಲಾಗಿದೆ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ತರಲಾಗಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯು ಸನ್ನಿಹಿತವಾಗಿಲ್ಲ ಎಂದು ತೋರುತ್ತಿದೆ, ಏಕೆಂದರೆ ಮೊಟೊರೊಲಾ ಕಂಪನಿಯು ಇತ್ತೀಚೆಗಷ್ಟೇ ಭಾರತದಲ್ಲಿ ಮೊಟೊರೊಲಾ ಮೋಟೋ ಎಡ್ಜ್ 30 ಸ್ಮಾರ್ಟ್‌ಪೋನನ್ನು ಬಿಡುಗಡೆ ಮಾಡಿದೆ. ಆದಾಗ್ಯೂ, ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ಆರಂಭದಲ್ಲಿ ಭಾರತದಲ್ಲಿಯೂ Moto G82 5G ಸ್ಮಾರ್ಟ್‌ಫೋನ್ ಸಾಧ್ಯತೆಯಿದ್ದು, ದೇಶದಲ್ಲಿ ಇದೇ ಬೆಲೆಯೊಂದಿಗೆ ಈ ಫೋನ್ ಬಿಡುಗಡೆಯಾಗುವ ನಿರೀಕ್ಷೆಯಿದೆ.
Motorola Moto G82 5g With 50mp Triple Rear Camera Setup Launched.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:23 pm
HK News Desk
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm