ಬ್ರೇಕಿಂಗ್ ನ್ಯೂಸ್
18-05-22 04:49 pm Source: Vijayakarnataka ಡಿಜಿಟಲ್ ಟೆಕ್
ಜನಪ್ರಿಯ ಮೊಬೈಲ್ ಕಂಪೆನಿ Vivo ತನ್ನ ಇತ್ತೀಚಿನ ಬಜೆಟ್ ಸ್ಮಾರ್ಟ್‌ಫೋನ್ Vivo Y01 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಕಡಿಮೆ ಬೆಲೆಯಲ್ಲಿ 4G ಸ್ಮಾರ್ಟ್‌ಫೋನ್ ಒಂದನ್ನು ಖರೀದಿಸಬೇಕು ಎಂದುಕೊಂಡಿರುವವರನ್ನು ಗುರಿಯಾಗಿಸಿಕೊಂಡು ಹೊಸ Vivo Y01 ಸ್ಮಾರ್ಟ್‌ಫೋನ್ ಕೇವಲ 8,999 ರೂ. ಬೆಲೆಯಲ್ಲಿ ಬಿಡುಗಡೆಗೊಂಡಿದ್ದು, ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇ, ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ P35 SoC ನಿಂದ ಚಾಲಿತವಾಗಿದೆ.1TB ವಿಸ್ತರಿಸಬಹುದಾದ ಮೆಮೊರಿ ಬೆಂಬಲ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊತ್ತು ಬಂದಿದೆ. ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಗಳಲ್ಲಿ ಲಭ್ಯವಿರುವ Redmi 10A ಮತ್ತು Samsung Galaxy M02 ಸ್ಮಾರ್ಟ್‌ಫೋನ್‌ಗಳ ವಿರುದ್ಧ ಸ್ಪರ್ಧಿಸಲು ಎಂಟ್ರಿ ನೀಡಿರುವ ನೂತನ Vivo Y01 ಸ್ಮಾರ್ಟ್‌ಫೋನ್ ಹೇಗಿದೆ ನೋಡೊಣ ಬನ್ನಿ.
ಡ್ಯುಯಲ್-ಸಿಮ್ (ನ್ಯಾನೋ) ಸಾಮರ್ಥ್ಯದ ನೂತನ Vivo Y01 ಸ್ಮಾರ್ಟ್‌ಫೋನ್ ಆಂಡ್ರಾಯ್ಡ್-ಆಧಾರಿತ Funtouch OS 11.1 ನಲ್ಲಿ ಕೆಲಸ ಮಾಡುತ್ತದೆ. 20:9 ಅನುಪಾತದಲ್ಲಿ 6.51-ಇಂಚಿನ HD+ IPS(720x1,600 ಪಿಕ್ಸೆಲ್‌ಗಳು) Halo Full View Display ಯನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್ ಐ ಪ್ರೊಟೆಕ್ಷನ್ ಮೋಡ್‌ನಿಂದ ಬೆಂಬಲಿತವಾಗಿದೆ, ಇದು ಕೆಲವು ಬ್ಲೂ ಲೈಟ್ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಹುಡ್ ಅಡಿಯಲ್ಲಿ, ಆಕ್ಟಾ-ಕೋರ್ MediaTek Helio P35 SoC ಜೊತೆಗೆ 2GB RAM ಅನ್ನು Vivo Y01 ಸ್ಮಾರ್ಟ್‌ಫೋನನ್ನು ಜೋಡಿಸಲಾಗಿದೆ. 32GB ಆನ್‌ಬೋರ್ಡ್ ಸ್ಟೋರೇಜ್‌ನೊಂದಿಗೆ ಬಿಡುಗಡೆಯಾಗಿರುವ ಈ ಫೋನ್ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಮೆಮೊರಿ ವಿಸ್ತರಣೆಯನ್ನು ಬೆಂಬಲಿಸುತ್ತದೆ.
Vivo Y01 ಸ್ಮಾರ್ಟ್‌ಫೋನ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾದ ಸಿಂಗಲ್, 8-ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ ಮತ್ತು ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. Vivo Y01 ನಲ್ಲಿನ ಸಂಪರ್ಕ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ವೈಶಿಷ್ಟ್ಯಗಳು ಒಳಗೊಂಡಿವೆ. ಈ ನೂತನ Vivo Y01 ಸ್ಮಾರ್ಟ್‌ಫೋನ್ ಮುಂಭಾಗವನ್ನು ನೋಡುವ ಮೂಲಕ ಫೋನ್ ಅನ್ನು ಅನ್‌ಲಾಕ್ ಮಾಡಲು ಸಹಾಯ ಮಾಡುವ ಫೇಸ್ ವೇಕ್ ವೈಶಿಷ್ಟ್ಯವನ್ನು ಸಹ ಹೊಂದಿದೆ ಎಂದು ಕಂಪೆನಿ ತಿಳಿಸಿದೆ. ಬಜೆಟ್ ಬೆಲೆಯಲ್ಲಿ ಬಿಡುಗಡೆಗೊಂಡಿದ್ದರೂ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ Vivo Y01 ಸ್ಮಾರ್ಟ್‌ಫೋನನ್ನು ಒಂದೇ ಚಾರ್ಜ್‌ನಲ್ಲಿ ಒಂದು ದಿನದ ಬಳಕೆಗೆ ರೇಟ್ ಮಾಡಲಾಗಿದೆ.
ಮೊದಲೇ ಹೇಳಿದಂತೆ ಭಾರತದಲ್ಲಿ Vivo Y01 ಸ್ಮಾರ್ಟ್‌ಫೋನನ್ನು 8,999 ರೂ.ಗಳಿಗೆ ಬಿಡುಗಡೆ ಮಾಡಲಾಗಿದ್ದು, ಏಕೈಕ 2GB RAM + 32GB ಸ್ಟೋರೇಜ್ ಮಾಡೆಲ್‌ನಲ್ಲಿ ಲಭ್ಯವಿರುವ ಈ ಸ್ಮಾರ್ಟ್‌ಫೋನನ್ನು ಎಲಿಗಂಟ್ ಬ್ಲ್ಯಾಕ್ ಮತ್ತು ಸಫೈರ್ ಬ್ಲೂ ಬಣ್ಣಗಳಲ್ಲಿ ಬಿಡುಗಡೆ ಮಾಡಲಾಗಿದೆ. ಇನ್ನು ಶೀಘ್ರದಲ್ಲೇ ವಿವೋ ಇ-ಸ್ಟೋರ್ ಮತ್ತು ಆಫ್‌ಲೈನ್ ಚಿಲ್ಲರೆ ಅಂಗಡಿಗಳ ಮೂಲಕ Vivo Y01 ಸ್ಮಾರ್ಟ್‌ಫೋನ್ ಮಾರಾಟವಾಗಲಿದೆ ಎಂದು ಕಂಪೆನಿಯು ಬಹಿರಂಗಪಡಿಸಿದೆ.
Vivo Y01 With A 20,9 Ips Display Launched In India: Price, Specifications.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:23 pm
HK News Desk
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm