ಬ್ರೇಕಿಂಗ್ ನ್ಯೂಸ್
19-05-22 07:38 pm Source: Vijayakarnataka ಡಿಜಿಟಲ್ ಟೆಕ್
ದೇಶದ ಮೊಬೈಲ್ ಮಾರುಕಟ್ಟೆಗೆ ಇತ್ತೀಚಿಗಷ್ಟೇ ಪರಿಚಿತವಾಗಿರುವ ವಿಶ್ವದ ಅತ್ಯಂತ ತೆಳುವಾದ 5G ಸ್ಮಾರ್ಟ್‌ಫೋನ್ Motorola Edge 30 ಇಂದಿನಿಂದ (ಮೇ 19) ಮಾರಾಟಕ್ಕೆ ಬಂದಿದೆ. ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್ ಮತ್ತು ರಿಟೇಲ್ ಸ್ಟೋರ್‌ಗಳಲ್ಲಿ Motorola Edge 30 ಸ್ಮಾರ್ಟ್‌ಫೋನನ್ನು ಮಾರಾಟಕ್ಕಿಡಲಾಗಿದ್ದು, 27,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಡೆಗೊಂಡಿರುವ Motorola Edge 30 ಸ್ಮಾರ್ಟ್‌ಫೋನ್ ಅನ್ನು HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಗ್ರಾಹಕರು 2,000 ರೂ.ಗಳ ಇನ್‌ಸ್ಟಂಟ್ ಡಿಸ್ಕೌಂಟ್ ನಲ್ಲಿ ಖರೀದಿಸಬಹುದು ಎಂದು Motorola ಕಂಪೆನಿ ತಿಳಿಸಿದೆ. 144Hz ರಿಫ್ರೆಶ್ ರೇಟ್ ಸಾಮರ್ಥ್ಯದ 6.5-ಇಂಚಿನ pOLED ಡಿಸ್‌ಪ್ಲೇ, ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್, 50-ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು IP52 ರೇಟಿಂಗ್ ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ಹೊತ್ತು Motorola Edge 30 ಸ್ಮಾರ್ಟ್‌ಫೋನ್ ದೇಶದ ಮಾರುಕಟ್ಟೆಗೆ ಎಂಟ್ರಿ ನೀಡಿದ್ದು, ನೂತನ Motorola Edge 30 ಸ್ಮಾರ್ಟ್‌ಫೋನ್ ಹೊಂದಿರುವ ಸಂಪೂರ್ಣ ವೈಶಿಷ್ಟ್ಯಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ.
ಮೊಟೊರೊಲಾ ಎಡ್ಜ್ 30 ವೈಶಿಷ್ಟ್ಯಗಳು
ಮೊದಲೇ ಹೇಳಿದಂತೆ ನೂತನ Motorola Edge 30 ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಸಾಮರ್ಥ್ಯದಲ್ಲಿ 6.7-ಇಂಚಿನ ಪೂರ್ಣ-HD+ (1,080x2,400 ಪಿಕ್ಸೆಲ್‌ಗಳು) pOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು HDR10+ ಬೆಂಬಲವನ್ನು ಹೊಂದಿದೆ. ಇನ್ನು Adreno 642L GPU ಜೊತೆಗೆ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G+ ಪ್ರೊಸೆಸರ್ ನಿಂದ ಚಾಲಿತವಾಗಿರುವ ಈ ಸ್ಮಾರ್ಟ್‌ಫೋನನ್ನು 8GB ವರೆಗೆ LPDDR5 RAM ನೊಂದಿಗೆ ಜೋಡಿಸಲಾಗಿದೆ. ಡ್ಯುಯಲ್-ಸಿಮ್ (ನ್ಯಾನೊ) ಸಾಮರ್ಥ್ಯದ Motorola Edge 30 ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12-ಆಧಾರಿತ MyUX ನಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ಈ ಹ್ಯಾಂಡ್ಸೆಟ್ 128GB ಅಂತರ್ಗತ ಸಂಗ್ರಹಣೆಯನ್ನು ಹೊಂದಿದೆ. 4,020mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿರುವ Motorola Edge 30 ಸ್ಮಾರ್ಟ್‌ಫೋನ್ 33W ಟರ್ಬೋಪವರ್ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 32.1 ಗಂಟೆಗಳ ಬ್ಯಾಟರಿ ಬ್ಯಾಕಪ್ ಅನ್ನು ನೀಡುತ್ತದೆ ಎಂದು ಹೇಳಲಾಗಿದೆ.
ಫೋಟೋಗಳು ಮತ್ತು ವೀಡಿಯೊಗಳಿಗಾಗಿ, Motorola Edge 30 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದು f/1.8 ಅಪರ್ಚರ್ ಲೆನ್ಸ್‌ನೊಂದಿಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಒಳಗೊಂಡಿರುತ್ತದೆ, f/2.2 ಅಪರ್ಚರ್ ಲೆನ್ಸ್‌ನೊಂದಿಗೆ 50-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ, ಮತ್ತು f/2.4 ಅಪರ್ಚರ್ ಲೆನ್ಸ್‌ನೊಂದಿಗೆ 2-ಮೆಗಾಪಿಕ್ಸೆಲ್ ಡೆಪ್ತ್ ಕ್ಯಾಮೆರಾ. ಇದು ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ f/2.4 ಅಪರ್ಚರ್ ಲೆನ್ಸ್‌ನೊಂದಿಗೆ 32-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಸಹ ಹೊಂದಿದೆ.ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, WiFi 6E, ಬ್ಲೂಟೂತ್ 5.2, GPS, NFC ಮತ್ತು USB ಟೈಪ್-C ಪೋರ್ಟ್ ಸೇರಿವೆ. ಈ ಹ್ಯಾಂಡ್ಸೆಟ್ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಹೊಂದಿದೆ. ಮತ್ತು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಹ್ಯಾಂಡ್‌ಸೆಟ್‌ನಲ್ಲಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಸಹ ಅಳವಡಿಸಲಾಗಿದೆ.
ಇನ್ನು ಈ ನೂತನ Motorola Edge 30 ಸ್ಮಾರ್ಟ್‌ಫೋನ್ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಂಡಿದ್ದು, 6GB + 128GB ಸ್ಟೋರೇಜ್ ಮಾದರಿಗೆ 27,999 ರೂ. ಹಾಗೂ 8GB + 128GB ಸ್ಟೋರೇಜ್ ಮಾದರಿಗೆ 29,999 ರೂ.ಗಳ ಬೆಲೆಯನ್ನು ಹೊಂದಿದೆ.
Moto Edge 30 Goes On Sale In India Today.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm