SSLC, ಪಿಯುಸಿ, ಐಟಿಐ, ಡಿಪ್ಲೊಮಾ ಪದವಿಧರರಿಗೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ ; ಆಗಸ್ಟ್ 29 ನೇರ ಸಂದರ್ಶನ

28-08-22 06:18 pm       Source: one india   ಉದ್ಯೋಗ

ಎಸ್. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

ಉದ್ಯೋಗ ಮೇಳ ನಡೆಯುವ ಸ್ಥಳ; ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-255293/ 9380663606/ 9108235132 ಕರೆ ಮಾಡಬಹುದಾಗಿದೆ.

ಸೆ.7 ರಂದು ಸಂದರ್ಶನ; ಕೃಷಿ ವಿಶ್ವವಿದ್ಯಾಲಯ ಧಾರವಾಡದ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ, ಹಿರಿಯ ಸಂಶೋಧನಾ ಸಹದ್ಯೋಗಿ 1 ತಾತ್ಕಾಲಿಕ ಹುದ್ದೆಗಾಗಿ ಸೆಪ್ಟೆಂಬರ್ 7 ರಂದು ಸಂದರ್ಶನ ನಡೆಯಲಿದೆ.

Job Vacancies with Donegal Youth Service - Youth Work Ireland

ಎಂ. ಎಸ್ಸಿ. ಕೃಷಿ ಕೀಟಶಾಸ್ತ್ರದಲ್ಲಿ ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳು ದಾಖಲಾತಿಗಳ ಎರಡು ಪ್ರತಿಗಳೊಂದಿಗೆ ಬೆಳಗ್ಗೆ 11 ಗಂಟೆಗೆ ಡೀನ್ (ಕೃಷಿ) ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.uasd.edu ವೀಕ್ಷಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಡೀನ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗಿನಿ ಯೋಜನೆಯಡಿ ಅರ್ಜಿ ಅಹ್ವಾನ; 2021-22 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.

ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ, ಆಡು, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಇತ್ಯಾದಿಗಳಿಗೆ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 55 ವರ್ಷ ವಯೋಮಿತಿಗೊಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಮಾತ್ರ ಅವಕಾಶವಿದೆ.

Jobs : Want a job? There are 70 thousand jobs in this company | नोकरी  पाहिजे? या कंपनीमध्ये आहेत 70 हजार नोकऱ्या, सविस्तर माहिती समजून करा असा  अर्ज

18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ.1 ಲಕ್ಷ ದಿಂದ ರೂ. 3 ಲಕ್ಷ ಹಾಗೂ ಶೇ.50 ಸಹಾಯಧನ ನೀಡಲಾಗುವುದು.

ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷ ಮೀರಬಾರದು. ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್‌ ಸೈಜ್ ಭಾವಚಿತ್ರ ಸಲ್ಲಿಸಬೇಕು.

ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿ ಈ ಯೋಜನೆಯ ಅರ್ಜಿಗಳು ಲಭ್ಯವಿದೆ. ಅರ್ಹ ಮಹಿಳೆಯರು ಸೆಪ್ಟೆಂಬರ್ 2ರೊಳಗೆ ಅರ್ಜಿ ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ದ್ವಿ ಪ್ರತಿಯಲ್ಲಿ ಸೆಪ್ಟೆಂಬರ್ 7ರೊಳಗೆ ಸಲ್ಲಿಸಬೇಕು.

Competition for jobs in India 30% higher in 2020 than last year: LinkedIn -  BusinessToday

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಿದೆ. ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು (ಪ.ಪಂ)ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂರವಾಣಿ ಸಂಖ್ಯೆ 08272-298379, 9980632352 ಕರೆ ಮಾಡಬಹುದಾಗಿದೆ.

Job Fair at Shivamogga for SSLC, PUC, ITI, Diploma Graduates; August 29 Live Interview.