ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ  ಭರ್ಜರಿ ಸಿಹಿಸುದ್ದಿ ; 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

17-10-22 07:54 pm       Source: one india   ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Photo credits : Kannada news

ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್ ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳನ್ನು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೆಪಿಎಸ್ ಸಿಯ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುಉವ ಪ್ರಕ್ರಿಯೆ ಅ.19 ರಿಂದ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಮುರು ಹಂತಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಹಾಗೂ ಶುಲ್ಕ ಪಾವತಿ ಮಾಡಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ www.kpsc.com ಗೆ ಭೇಟಿ ನೀಡಬಹುದು.

KPSC Recruitment 2022 jobs, Apply Online now.