ಬ್ರೇಕಿಂಗ್ ನ್ಯೂಸ್
02-03-23 06:43 pm Bangalore Correspondent ಉದ್ಯೋಗ
ಬೆಂಗಳೂರು, ಮಾ.2: ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡುವ ಉತ್ಸಾಹ ಇದ್ದು, ಅದಕ್ಕಾಗಿ ತಯಾರಿ ನಡೆಸುತ್ತಿದ್ದರೆ ನಿಮಗೆ ಇಲ್ಲೊಮೂದು ಬಂಪರ್ ಉದ್ಯೋಗಾವಕಾಶವಿದೆ.
ದೇಶಾದ್ಯಂತ 600 ಹುದ್ದೆಗಳ ಭರ್ತಿಗೆ ಇಂಡಸ್ಟ್ರೀಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ - ಐಡಿಬಿಐ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಮುಂದಾಗಿದ್ದು, ಈ ಸಂಬಂಧ ಈಗಾಗಲೇ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಕಾಶವನ್ನು ಇದೀಗ ವಿಸ್ತರಿಸಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ, ವಿದ್ಯಾಭ್ಯಾಸ ಸೇರಿದಂತೆ ಇನ್ನಿತರ ಪ್ರಮುಖ ಅಂಶಗಳ ಮಾಹಿತಿ ಇಲ್ಲಿದೆ..
ಹುದ್ದೆ ವಿವರ: ದೇಶಾದ್ಯಂತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹೊಂದಿರುವ ಐಡಿಬಿಐ ಒಟ್ಟು 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ನೇಮಕಾತಿ ದೇಶಾದ್ಯಂತ ನಡೆಯಲಿದ್ದು, ದೇಶದ ಎಲ್ಲಾ ರಾಜ್ಯದ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾಭ್ಯಾಸ: ಈ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21ವರ್ಷವಾಗಿದ್ದು, ಗರಿಷ್ಠ ವಯೋಮಿತಿ - 30 ವರ್ಷ. ಜನವರಿ 1, 2023ಕ್ಕೆ ಒಳಗೆ ಅವರ ವಯೋಮಿತಿ 30ವರ್ಷ ತುಂಬಿರಬೇಕು. ಇನ್ನು ಒಬಿಸಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ಮಾಡಿದ್ದು, ಪ. ಜಾ, ಪ.ಪಂ, ಇಸಿಒ, ಎಸ್ಎಸ್ಸಿಒ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 200 ರೂ. ನಿಗದಿ ಮಾಡಿದ್ದು, ಇತರೆ ಅಭ್ಯರ್ಥಿಗಳಿ 1000 ರೂ. ನಿಗದಿ ಮಾಡಲಾಗಿದೆ. ಈ ಅರ್ಜಿ ಶುಲ್ಕಗಳನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ನಾಲ್ಕು ವಿಧದಲ್ಲಿ ಆಯ್ಕೆ ನಡೆಸಲಾಗುವುದು. ಆನ್ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ ಬಳಿಕ ವೈದ್ಯಕೀಯ ತಪಾಸಣೆಗೆ ಒಳಗಾಗಿಸಲಾಗುವುದು.
ಅರ್ಜಿ ಸಲ್ಲಿಕೆ ಹೇಗೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್ಸೈಟ್ಗೆ ಭೇಟಿ ಮಾಡಿ, ಅಲ್ಲಿ ಅರ್ಜಿ ಸಲ್ಲಿಕೆ ವಿವರದಲ್ಲಿ ನಿಮ್ಮ ಅಗತ್ಯ ದಾಖಲಾತಿ ಸೇರಿದಂತೆ ಪ್ರಮುಖ ಮಾಹಿತಿಗಳನ್ನು ಭರ್ತಿ ಮಾಡಿ. ಬಳಿಕ ಅರ್ಜಿ ಶುಲ್ಕದ ವಿವರಗಳನ್ನು ನೀಡಿ. ಈ ಅರ್ಜಿಗಳನ್ನು ನಿಗದಿತ ದಿನಾಂಕಕ್ಕೆ ಮುನ್ನ ಸಲ್ಲಿಕೆ ಆಗುವಂತೆ ನೋಡಿಕೊಳ್ಳಿ.
ಅರ್ಜಿ ಸಲ್ಲಿಕೆ ದಿನಾಂಕ: ಈ ಹುದ್ದೆಗಳಿಗೆ ಫೆ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಈ ಅರ್ಜಿ ಸಲ್ಲಿಕೆಯ ಕೊನೆ ದಿನಾಂಕವನ್ನು ಮಾರ್ಚ್ 12ರವರೆಗೆ ವಿಸ್ತರಿಸಲಾಗಿದೆ.
ಈ ಸಂಬಂಧ ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಕೃತ ಅಧಿಸೂಚನೆ ಮತ್ತು ಸಂಪೂರ್ಣ ವಿವರವನ್ನು ಪರಿಶೀಲಿಸಲು ಅಭ್ಯರ್ಥಿಗಳು idbibank.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
IDBI Bank Recruitment 2023- Industrial Development Bank Of India Ltd., as a full service universal bank, provides a wide gamut of financial products and services encompassing deposits, loans, payment services and investment solutions.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
04-10-26 07:07 pm
HK News Staffer
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
04-10-26 12:51 pm
HK News Staffer
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm