ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಬೆಂಗಳೂರು ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಿಂದ ನೇರ ಸಂದರ್ಶನಕ್ಕೆ ಆಹ್ವಾನ

18-07-23 08:29 pm       Source: Vijayakarnataka   ಉದ್ಯೋಗ

ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ.

ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್‌ ಪ್ರಿಂಟ್‌ ತೆಗೆದುಕೊಂಡು ಹೋಗಲು ಮರೆಯದಿರಿ.

ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್‌.. ! ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.

ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.

ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.

ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.

ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್‌ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.

Walk in interview for job fair at Bengaluru sub regional employment exchange office.