ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm