ಬ್ರೇಕಿಂಗ್ ನ್ಯೂಸ್
09-01-25 10:09 pm Bangalore Correspondent ಉದ್ಯೋಗ
ಬೆಂಗಳೂರು, ಜ.9: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ಅಬಕಾರಿ ಇಲಾಖೆ ಅರ್ಜಿಗಳನ್ನು ಆಹ್ವಾನ ಮಾಡಲಿದೆ.
ಹುದ್ದೆಗಳನ್ನು ಭರ್ತಿಗೊಳಿಸಲು ಅಬಕಾರಿ ಇಲಾಖೆ ಆಯುಕ್ತರಿಗೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶದ ಪ್ರತಿ ನೀಡುವ ಮೂಲಕ ಅರ್ಜಿ ಆಹ್ವಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಅಥವಾ ಇದೇ ತಿಂಗಳ ಕೊನೆಯಲ್ಲಿ ಅಬಕಾರಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ. ಇದಕ್ಕಾಗಿ ಕಾದು ಕುಳಿತಿರುವ ಉದ್ಯೋಗಾಕಾಂಕ್ಷಿಗಳು ಶಿಕ್ಷಣ ದಾಖಲೆ ಸೇರಿದಂತೆ ಹುದ್ದೆಗೆ ಬೇಕಾಗುವುದನ್ನು ಮೊದಲೇ ಸಿದ್ಧ ಪಡಿಸಿಕೊಳ್ಳಬೇಕು.
ಅಬಕಾರಿ ಪೇದೆ ಹುದ್ದೆ 942, ಅಬಕಾರಿ ಉಪ ನಿರೀಕ್ಷಕರ 265 ಹುದ್ದೆಗಳನ್ನು (ಕಲ್ಯಾಣ ಕರ್ನಾಟಕ ಸಹಿತ) ತುಂಬಲಾಗುತ್ತದೆ. ಒಟ್ಟು 1,207 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕವಾಗಿ ವೇತನ ಶ್ರೇಣಿ ಆರಂಭದಲ್ಲಿ ಅಬಕಾರಿ ಉಪ ನಿರೀಕ್ಷಕರಿಗೆ 30,350 ಹಾಗೂ ಪೇದೆ ಕೆಲಸಕ್ಕೆ 21,400 ರೂಪಾಯಿಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಬಕಾರಿ ಉಪ ನಿರೀಕ್ಷಕ ಹುದ್ದೆಗೆ ಪದವಿ ಹಾಗೂ ಪೇದೆ ಕೆಲಸಕ್ಕೆ ದ್ವಿತೀಯ ಪಿಯುಸಿ ಕನಿಷ್ಠ ಶಿಕ್ಷಣ ಮಾನದಂಡ ನಿಗದಿ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆಗೆ ಬಂದರೆ ಪರೀಕ್ಷೆ, ದೈಹಿಕ ಸಾಮರ್ಥ್ಯ, ಮೆಡಿಕಲ್ ಪರೀಕ್ಷೆ ಇರುತ್ತದೆ. ಉದ್ಯೋಗಗಳ ಬಗ್ಗೆ ಹೆಚ್ಚಿನ ಮಾಹಿತಿ ಅಬಕಾರಿ ಇಲಾಖೆ ಅಧಿಸೂಚನೆ ಬಳಿಕ ಎಲ್ಲವೂ ತಿಳಿದು ಬರಲಿದೆ. ಉದ್ಯೋಗ ಆಕಾಂಕ್ಷಿಗಳು ಪೂರ್ವ ತಯಾರಿ ಮಾಡಿದರೇ ಉತ್ತಮ.
The government is taking steps to fill the vacant posts of Excise Sub-Inspectors and Excise Constables in the state Excise Department. The Excise Department will soon invite applications for more than a thousand jobs.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm