ಬ್ರೇಕಿಂಗ್ ನ್ಯೂಸ್
07-08-25 12:10 pm HK News Desk ಉದ್ಯೋಗ
ಬೆಂಗಳೂರು, ಆ.7 : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) 10 ಸಾವಿರಕ್ಕೂ ಹೆಚ್ಚು ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೇ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ' (ಎಸ್ಬಿಐ) ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.
ಆ.6ರಿಂದಲೇ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಆಗಸ್ಟ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬ್ಯಾಂಕ್ನ ಗ್ರಾಹಕರ ಸಹಾಯ ಮತ್ತು ಮಾರಾಟ ವಿಭಾಗದಲ್ಲಿ ಒಟ್ಟು 6,589 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಕರ್ನಾಟಕದಲ್ಲಿ 198 ಬ್ಯಾಕ್ಲ್ಯಾಗ್ ಹುದ್ದೆಗಳು ಸೇರಿದಂತೆ ಒಟ್ಟು 468 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಬರೆಯುವ ಅವಕಾಶವೂ ಇದೆ. ನೇಮಕ ಪ್ರಕ್ರಿಯೆಯ ಭಾಗವಾಗಿ ಸ್ಥಳೀಯ ಭಾಷಾ ಪರೀಕ್ಷೆಯೂ ನಡೆಯಲಿದೆ. ಈ ವರ್ಷದ ಸೆಪ್ಟೆಂಬರ್ ಮತ್ತು ನವೆಂಬರ್ನಲ್ಲಿ ಕ್ರಮವಾಗಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಕಳೆದ ವರ್ಷ 14,735 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಎಸ್.ಬಿಐ ನೇಮಕಾತಿ ನಡೆಸಿತ್ತು.
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಇಂಟಗ್ರೇಟೆಡ್ ಡ್ಯೂಯಲ್ ಡಿಗ್ರಿ ಪಡೆದವರೂ ಅರ್ಜಿ ಸಲ್ಲಿಸಲು ಅರ್ಹರು. ರಾಜ್ಯದಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು ಮತ್ತು ಬರೆಯಲು ತಿಳಿದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ ವಯೋಮಿತಿ 28 ವರ್ಷ ಆಗಿರುತ್ತದೆ.
The State Bank of India (SBI) has invited online applications for the recruitment of 6,589 Clerical Cadre (Junior Associate - Customer Support & Sales) posts across the country. The application process began on August 6 and will remain open until August 26.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm