ಉಡುಪಿ ಜಿಲ್ಲಾ ಕೋರ್ಟ್‌ನಲ್ಲಿ ವಿವಿಧ ಹುದ್ದೆ ಖಾಲಿ ಇದೆ

07-09-21 10:08 pm       Source ; One India Kannada   ಉದ್ಯೋಗ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಉಡುಪಿ ಉಡುಪಿ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ.

ಉಡುಪಿ, ಸೆಪ್ಟೆಂಬರ್ 07 :  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಉಡುಪಿ ಉಡುಪಿ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 30/9/2021 ಕೊನೆಯ ದಿನವಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ 8. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಭಾರತೀಯ ಸ್ಟೇಟ್ ಬ್ಯಾಂಕ್ ಚಲನ್ ಮೂಲಕ ಶುಲ್ಕವನ್ನು ಪಾವತಿ ಮಾಡಲು 4/10/2021 ಕೊನೆಯ ದಿನ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.



ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದಡಿ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನುಐಚ್ಛಿಕ ವಿಷಯಗಳನ್ನಾಗಿ ಹೊಂದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ ವಿವರ; ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿ ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷಗಳು. 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗೆ 40 ವರ್ಷಗಳು.

ಆಯ್ಕೆಯಾದ ಅಭ್ಯರ್ಥಿ ಎರಡು ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳಿಗೆ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿರತಕ್ಕದ್ದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Stenographer Recruitment in Udupi District Court, 8 posts are available.