ಬ್ರೇಕಿಂಗ್ ನ್ಯೂಸ್
09-09-21 06:58 pm Source ; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 09 : ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 27/9/2021 ಕೊನೆಯ ದಿನವಾಗಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ರಾಜ್ಯ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಕ ಮಾಡಲಾಗುತ್ತಿದೆ.
ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಶಿವಮೊಗ್ಗ, ರಾಮನಗರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಕೆಲಸ ಮಾಡಬೇಕಿದೆ. ಒಟ್ಟು 23 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸಲ್ಲಿಸಬೇಕು.
ಜ್ಯುನಿಯರ್ ಕನ್ಸಲ್ಟ್‌ಟೆಂಟ್ (ಎಕ್ಸಿಕ್ಯುಟಿವ್ ಇಂಜಿನಿಯರ್ ದರ್ಜೆ) 1, ಪ್ರಾಜೆಕ್ಟ್ ಮ್ಯಾನೇಜರ್ 1, ಮಾನಿಟರಿಂಗ್ & ಇವ್ಯಾಲ್ಯುವೇಷನ್ ಎಕ್ಸ್‌ಪರ್ಟ್ 1, ಎಂಚ್‌ಎಂ ಕನ್ಸಲ್ಟ್‌ಟೆಂಟ್ 1, ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ 4, ಡಿಸ್ಟಿಕ್ ಎಂಇಎಸ್ ಕನ್ಸಲ್ಟ್‌ಟೆಂಟ್ 2 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಜ್ಯುನಿಯರ್ ಕನ್ಸಲ್ಟ್‌ಟೆಂಟ್ (ಎಕ್ಸಿಕ್ಯುಟಿವ್ ಇಂಜಿನಿಯರ್ ದರ್ಜೆ) ಹುದ್ದೆಗೆ 62, ಎಂಚ್‌ಎಂ ಕನ್ಸಲ್ಟ್‌ಟೆಂಟ್ ಹುದ್ದೆಗೆ 45, ಡಿಸ್ಟಿಕ್ ಎಂಇಎಸ್ ಕನ್ಸಲ್ಟ್‌ಟೆಂಟ್ ಹುದ್ದೆಗೆ 45 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಉಳಿದ ಹುದ್ದೆಗೆ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಇದೆ.
ಜ್ಯುನಿಯರ್ ಕನ್ಸಲ್ಟ್‌ಟೆಂಟ್ (ಎಕ್ಸಿಕ್ಯುಟಿವ್ ಇಂಜಿನಿಯರ್ ದರ್ಜೆ) ಹುದ್ದೆಗೆ 15,000-60,000 ರೂ. ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ 10,0000-12,0000, ಮಾನಿಟರಿಂಗ್ & ಇವ್ಯಾಲ್ಯುವೇಷನ್ ಎಕ್ಸ್‌ಪರ್ಟ್ ಹುದ್ದೆಗೆ 60 ರಿಂದ 75 ಸಾವಿರ, ಎಂಚ್‌ಎಂ ಕನ್ಸಲ್ಟ್‌ಟೆಂಟ್ ಹುದ್ದೆಗೆ 50 ಸಾವಿರು, ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ 35 ರಿಂದ 45 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.
ಒಂದು ತಿಂಗಳ ನೋಟಿಸ್; ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರಿಸಲಾಗುವುದು. ಒಂದೊಮ್ಮೆ ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟೀಸ್ ನೀಡಿ ರದ್ದುಪಡಿಸಲಾಗುವುದು.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಜೊತೆಗೆ 'ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ' ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಸಲ್ಲಿಸಬೇಕು.
ದಿನಾಂಕ 27/9/2021ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಸ್ನಾತಕ/ ಸ್ನಾತಕೋತ್ತರ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಯು ಇಲಾಖೆಯ ಅಥವಾ ಹೊರಗುತ್ತಿಗೆ ಸಂಸ್ಥೆಯೊಂದಿಗೆ ನಿಗದಿತ ನಮೂನೆಯಲ್ಲಿ ಕರಾರು ಒಪ್ಪಂದವನ್ನು ಮಾಡಿಕೊಳ್ಳಬೇಕು ಹಾಗೂ ಕಾರ್ಯಾನುಭವದ ಆಧಾರದ ಮೇಲೆ ಮಾಸಿಕ ಸಮಾಲೋಚನಾ ಶುಲ್ಕ ನಿಗದಿಪಡಿಸಲಾಗುವುದು. ಕರಾರು ಒಪ್ಪಂದ ಮಾಡಿಕೊಂಡ ಅಭ್ಯರ್ಥಿಗೆ ಇಲಾಖೆಯಲ್ಲಿನ ಯಾವುದೇ ಹುದ್ದೆಗಳಲ್ಲಿ ವಿಲೀನಗೊಳ್ಳಲು/ ಮುಂದುವರೆಯಲು ಯಾವುದೇ ಹಕ್ಕು ಇರುವುದಿಲ್ಲ.
ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಹಾಗೂ ಆಯಾ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಾಗುತ್ತದೆ. ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.
ನೇಮಕಾತಿಯನ್ನು ಪೂರ್ಣವಾಗಿ ಮತ್ತು ಭಾಗಶಃ ರದ್ದು ಮಾಡುವ/ ಮುಂದೂಡುವ/ ಬದಲಾವಣೆ ಮಾಡುವ ಹಕ್ಕನ್ನು ಇಲಾಖೆಯು ಹೊಂದಿರುತ್ತದೆ. ಜಿಲ್ಲಾ ಪಂಚಾಯಿತಿಯ ಹುದ್ದೆಗಳು ಜಿಲ್ಲಾಮಟ್ಟದ ಹುದ್ದೆಯಾಗಿರುವುದರಿಂದ ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ; Commissioner, Rural Drinking Water and Sanitation Department, 2nd Floor, KHB Complex, Cauvery Bhavan, K.G Road, Benglauru - 560009.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ
https://rdpr.karnataka.gov.in, https://swachhamevajayate.org
Apply for Jobs as Manager, Consultants and also other posts at Karnataka Rural Development and Panchayat raj Department.
04-02-25 11:32 pm
HK News Desk
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
Two-wheeler rider fined, Bangalore Traffic: ಎ...
04-02-25 03:09 pm
Cow theft, Mankal Vaidya: ಇನ್ಮುಂದೆ ಗೋಹತ್ಯೆ ನಡ...
04-02-25 12:59 pm
Mandya Car Canal Accident, Hassan Drowning: ಮ...
03-02-25 10:38 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
04-02-25 07:47 pm
Mangalore Correspondent
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
03-02-25 05:46 pm
Mangalore Correspondent
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am