ಬ್ರೇಕಿಂಗ್ ನ್ಯೂಸ್
17-09-21 06:57 pm Source ; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 16 : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಹಾಗೂ ಕನ್ಸಲ್ಟೆಂಟ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.
19/8/2021ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಆದಷ್ಟು ಬೇಗ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಕೇಂದ್ರ ಕಚೇರಿ, ಬೆಳಗಾವಿಯ ಪ್ರಾಂತೀಯ ಕಚೇರಿಯಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಒಟ್ಟು 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಅರ್ಜಿ ಹಾಕಬಹುದು.
ಖಾಲಿ ಇರುವ ಹುದ್ದೆಗಳು; ನ್ಯಾಯವಾದಿಗಳು (ಬೆಂಗಳೂರು ಕೇಂದ್ರ ಕಚೇರಿ 1, ಬೆಳಗಾವಿ ಪ್ರಾಂತೀಯ ಕಚೇರಿ 1). ಸನ್ನದು ಲೆಕ್ಕಪರಿಶೋಧಕರು (ಬೆಂಗಳೂರು ಕೇಂದ್ರ ಕಚೇರಿ 1, ಬೆಳಗಾವಿ ಪ್ರಾಂತೀಯ ಕಚೇರಿ 1). ಆರ್ಥಿಕ ಸಲಹೆಗಾರರು 1, ತಾಂತ್ರಿಕ ಸಲಹೆಗಾರರು (ಸಂಯುಕ್ತ ಸಹಕಾರಿ ಸಾಫ್ಟ್‌ವೇರ್ ಅಭಿವೃದ್ಧಿ).
ಆಯ್ಕೆ ವಿಧಾನ, ಅರ್ಹತೆ, ವೇತನ, ಸೇವಾ ಅವಧಿ, ಷರತ್ತು ಮುಂತಾದ ವಿವರಗಳಿಗಾಗಿ ಅಭ್ಯರ್ಥಿಗಳು www.souharda.coop ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಆಸಕ್ತರು ಅರ್ಜಿಯನ್ನು ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಸ್ವಯಂ ದೃಢೀಕರಿಸಿದ ದಾಖಲೆಗಳನ್ನು ಲಗತ್ತಿಸಿ ಶೀಘ್ರವಾಗಿ ಕಳಿಸಬೇಕು.
ಅರ್ಜಿ ಸಲ್ಲಿಕೆಗೆ ವಿಳಾಸ; Karnataka State Souharda Federal Cooperative Limited, Nirman Bhavan, Dr. Rajkumar Road, 1st Block, Rajajinagar, Bengaluru - 560010.
ಹೈಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ; ಕರ್ನಾಟಕ ಹೈಕೋರ್ಟ್‌ನಲ್ಲಿ ಮೂರು ಭಾಷಾಂತರಕಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಲು ಅಕ್ಟೋಬರ್ 19ರ ತನಕ ಅವಕಾಶವಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪದವಿ ಅಥವ ಸ್ನಾತಕೋತ್ತರ ಪದವಿ ವಿಷಯದಲ್ಲಿ ಕನಿಷ್ಠ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮತಿ 35 ವರ್ಷ. ಒಬಿಸಿ 38, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷಗಳು.
ಮೈಸೂರಿನಲ್ಲಿ ಉದ್ಯೋಗ ಖಾಲಿ ಇದೆ; ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಮೈಸೂರಿನಲ್ಲಿ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಾವಳಿ 1977 ನಿಯಮ 26 ರಲ್ಲಿ ತಿಳಿಸಿರುವ ಅಗತ್ಯ ಷರತ್ತುಗಳನ್ನು ಅನ್ವಯವಾಗಿರಬೇಕು.
ನೇಮಕಾತಿ ಬಯಸುವ ಅಭ್ಯರ್ಥಿ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರಬೃಕು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಜಾತಿ, ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿನ ಅನುಭವ ಇತ್ಯಾದಿ ವಿವರಗಳನ್ನು ನಮೂದಿಸಿದ ಸ್ವಯಂ ವಿವರಣೆಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿ ರಾಜ್ಯ ಬಾರ್ ಕೌನ್ಸಿಲ್ ನೋಂದಣಿ ಮತ್ತು ವಕೀಲ ವೃತ್ತಿಯಲ್ಲಿ ಹೊಂದಿರುವ ಅನುಭವದ ಬಗ್ಗೆ ಸ್ಥಳೀಯ ವಕೀಲರ ಸಂಘದ ದೃಢೀಕರಣ ಪತ್ರ ಇತ್ಯಾದಿ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
Karnataka State Souharda Federal Cooperative Limited invited applications for various post. Candidates can download applications from website and submit as soon as possible.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 01:32 pm
Mangalore Correspondent
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm