ಬ್ರೇಕಿಂಗ್ ನ್ಯೂಸ್
29-09-21 06:45 pm Source ; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 29: ಕರ್ನಾಟಕದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಕಂದಾಯ ಇಲಾಖೆ ಹೇಳಿದೆ. ಹೇಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ? ಎಂದು ಸರ್ಕಾರ ವಿವರಣೆಯನ್ನು ಸಹ ನೀಡಿದೆ.
ಕಳೆದ ವಾರ ಅಂತ್ಯಗೊಂಡ ವಿಧಾನ ಪರಿಷತ್ ಕಲಾಪದಲ್ಲಿ ಈ ಕುರಿತು ಕಂದಾಯ ಇಲಾಖೆಯಿಂದ ಉತ್ತರ ನೀಡಲಾಗಿದೆ. ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಒಟ್ಟು ಗ್ರಾಮ ಲೆಕ್ಕಿಗರ ಹುದ್ದೆ 9,839 ಆಗಿದೆ. ಪ್ರಸ್ತುತ ರಾಜ್ಯದಲ್ಲಿ 1,789 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ. ಗ್ರಾಮ ಲೆಕ್ಕಿಗರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾನದಂಡಗಳನ್ನು ಸಹ ಇಲಾಖೆ ಪರಿಷತ್‌ನಲ್ಲಿ ವಿವರಣೆ ಮೂಲಕ ಒದಗಿಸಿದೆ.
ಗ್ರಾಮ ಲೆಕ್ಕಿಗರ ಹುದ್ದೆಯು ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಸಮಾನಾಂತರ ಹುದ್ದೆಯಾಗಿದೆ. ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಕರ್ನಾಟಕ ನಾಗರಿಕ ಸೇವೆಗಳು (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು 1978ರ ಪ್ರಕಾರ ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೇಗೆ ನೇಮಕಾತಿ?; ಕಂದಾಯ ಇಲಾಖೆ ಕೆಲಸ ಕಾರ್ಯಗಳನ್ನು ತಳಮಟ್ಟದಲ್ಲಿ ಗ್ರಾಮ ಲೆಕ್ಕಿಗರ ಮೂಲಕ ಕಾರ್ಯಗತಗೊಳಿಸಬೇಕಾಗುತ್ತದೆ. ಜಿಲ್ಲಾಧಿಕಾರಿಗಳು ಗ್ರಾಮ ಲೆಕ್ಕಿಗರ ನೇಮಕಾತಿ ಸಕ್ಷಮ ಪ್ರಾಧಿಕಾರ ಆಗಿರುತ್ತಾರೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ಕ್ಕೆ ಕರ್ನಾಟಕ ಸಾಮಾನ್ಯ ಸೇವೆಗಳು (ರೆವಿನ್ಯು ಸಬಾರ್ಡಿನೇಟ್ ಬ್ರಾಂಚ್) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು 2008ರ ಅನ್ವಯ ದ್ವಿತೀಯ ಪಿಯುಸಿಯಲ್ಲಿಗಳಿಸಿದ ಗರಿಷ್ಠ ಅಂಕಗಳನ್ನು ಪರಿಗಣಿಸಿ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾ ಜಿಲ್ಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಅನುಗುಣವಾಗಿ ನೇರ ನೇಮಕಾತಿ ಮೂಲಕ ನಿಯಮಾನುಸಾರ ಭರ್ತಿ ಮಾಡಲಾಗುತ್ತದೆ.
ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡುವ ವಿಚಾರದಲ್ಲಿ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಪ್ರಸ್ತುತ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ ಮಾಡಿಕೊಳ್ಳುವ ಯಾವುದೇ ಪ್ರಸ್ತಾವನೆ ಇರುವುದಿಲ್ಲ ಎಂದು ಹೇಳಿದೆ.
ನಿಯಮಗಳೇನು?; ಗ್ರಾಮ ಲೆಕ್ಕಿಗರ ನೇಮಕಾತಿ ಸಂದರ್ಭದಲ್ಲಿ ಅನುಸರಿಸುವ ನಿಯಮ/ ಮಾನದಂಡಗಳನ್ನು ಸಹ ಕಂದಾಯ ಇಲಾಖೆ ಸ್ಪಷ್ಟಪಡಿಸಿದೆ. ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಎಸ್‌ಡಿಎ ಹುದ್ದೆಗೆ ಸಮಾನಾಂತರ ಹುದ್ದೆಯಾಗಿದ್ದು, ಎಸ್‌ಡಿಎಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲೇ ಗಳಿಸಿರುವ ಅಂಕಗಳನ್ನು ಪರಿಗಣಿಸಿ ನೇಮಾಕಾತಿ ಮಾಡಿಕೊಳ್ಳುವ ಬಗ್ಗೆಯೂ ವಿವರಣೆ ನೀಡಲಾಗಿದೆ.
ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಕರ್ನಾಟಕ ಜನರಲ್ ಸರ್ವಿಸಸ್ (ರೆವಿನ್ಯೂ ಸಬಾರ್ಡಿನೇಟ್ ಬ್ರಾಂಜ್) (ಕೇಡರ್ ಅಂಡ್ ರೆಕ್ರೂಟ್‌ಮೆಂಟ್) (ತಿದ್ದುಪಡಿ) ನಿಯಮಗಳು 2008 ಮತ್ತು ಕರ್ನಾಟಕ ಜನರಲ್ ಸರ್ವಿಸಸ್ (ರೆವಿನ್ಯು ಸಬಾರ್ಡಿನೆಟ್ ಬ್ಯಾಂಚ್) (ಕೇಡರ್ ಅಂಡ್ ರಿಕ್ರೂಟ್‌ಮೆಂಟ್) (ತಿದ್ದುಪಡಿ) ನಿಯಮಗಳು 2009ರ ಅನ್ವಯ ಪಿಯುಸಿ ಪರೀಕ್ಷೆ ಅಥವ ಸಿಬಿಎಸ್‌ಸಿ/ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳನ್ನು ಮೀಸಲಾತಿ ಮತ್ತು ಮೆರಿಟ್ ಆಧಾರದ ಮೇಲೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಆಯ್ಕೆ ಸಮಿತಿಯ ಮುಖಾಂತರ ಖಾಲಿ ಹುದ್ದೆಗಳಿಗೆ ಅನುಗುಣವಾಗಿ ಭರ್ತಿ ಮಾಡಿಕೊಳ್ಳಲಾಗುತ್ತದೆ.
ಜಿಲ್ಲಾವಾರು ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ವಿವರಗಳನ್ನು ಸಹ ಕಂದಾಯ ಇಲಾಖೆ ಉತ್ತರ ನೀಡುವಾಗ ಪರಿಷತ್ ಮಂದೆ ಮಂಡನೆ ಮಾಡಿದೆ. ಜಿಲ್ಲಾಧಿಕಾರಿಗಳು ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.
Karnataka government clarification on Village Accountant Recruitment. 1789 village accountant posts are vacant across the state.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm