ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆಲಸ ಖಾಲಿ ಇದೆ ; ಅರ್ಜಿ ಸಲ್ಲಿಸಿ

11-10-21 08:10 pm       source: Oneindia Kannada   ಉದ್ಯೋಗ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.

ಮಂಗಳೂರು, ಅಕ್ಟೋಬರ್ 11: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಪೌರ ಕಾರ್ಮಿಕರುಹುದ್ದೆಗಳ ಸಂಖ್ಯೆ: 190

ಅರ್ಹತೆಗಳು ಯಾವುದೇ ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ ಅರ್ಹತೆಗಳುಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ : 17000 ರೂ. - 28950 ರೂ.

ಅರ್ಜಿ ಶುಲ್ಕ ವಿವರSC / ST / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.ಸಾಮಾನ್ಯ, ಒಬಿಸಿ, EWS ಅಭ್ಯರ್ಥಿಗಳಿಗೆ 200 ರೂ.

ಅರ್ಜಿ ಸಲ್ಲಿಸುವುದು ಹೇಗೆ?ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಿಡಿಎಫ್ ಚಲನ್ ಅನ್ನು ಡೌನ್‌ಲೋಡ್‌ ಮಾಡಿಕೊಂಡು ಕೆನರಾ ಬ್ಯಾಂಕ್‌ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡತಕ್ಕದ್ದು. ಶುಲ್ಕ ಪಾವತಿಸಿದ ನಂತರ ಚಲನ್‌ನ ಪ್ರತಿಯನ್ನು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ಇತರ ದಾಖಲೆಗಳೊಂದಿಗೆ ಸ್ಕ್ಯಾನ್‌ ಮಾಡಿ ಅಪ್‌ಲೋಡ್‌ ಮಾಡಬೇಕು.

ಅರ್ಜಿಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ವೆಬ್‌ಸೈಟ್‌ http://dakshinakannadadudc.mrc.gov.in ಅಥವಾ https://de.nic.inಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವೆಬ್‌ಸೈಟ್‌ http://mangaurucity.mrc.gov.in ಮೂಲಕ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-10-2021ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-11-2021

ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಲು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ತೆರೆದಿರುವ ಸಹಾಯ ಕೇಂದ್ರ ಅಥವಾ ಜಿಲ್ಲೆಯ ನಾಗರಿಕ ಸೇವಾ ಕೇಂದ್ರಗಳನ್ವಯ ಸೇವೆಗಳನ್ನು ಉಪಯೋಗಿಸಬಹುದು.

mangaluru city corporation recruitment 2021 application invited for civic labours posts