ಬ್ರೇಕಿಂಗ್ ನ್ಯೂಸ್
20-12-21 10:59 am Source: Oneindia Kannada ಉದ್ಯೋಗ
ಬೆಂಗಳೂರು, ಡಿ. 18: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂ. ಜಿ. ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ ಯೋಜನೆ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಕೆ ಮಾಡಲು ಜನವರಿ 5, 2022 ಕೊನೆಯ ದಿನವಾಗಿದೆ.
ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ, ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಒಂದು ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದ್ದು, ಸೇವೆ ತೃಪ್ತಿಕರವಾಗಿದ್ದಲ್ಲಿ ಗುತ್ತಿಗೆ ಅವಧಿಯನ್ನು ನವೀಕರಿಸಲಾಗುತ್ತದೆ.
ಇದು ಸರ್ಕಾರಿ ಸೇವೆ/ ಹುದ್ದೆ ಆಗಿರುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವುದಾದರೆ ಪ್ರತಿ ಹುದ್ದೆಗೆ ಪ್ರತ್ಯೇಕ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಹುದ್ದೆಗಳ ವಿವರ;
ಜಿಲ್ಲಾ ಸಂಪನ್ಮೂಲ ಪರಿಶೋಧನಾ ಸಂಪನ್ಮೂಲ ವ್ಯಕ್ತಿ (1). ಮಾಸಿಕ ವೇತನ 24,000 ರೂ.ಗಳು. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.
ಅಭ್ಯರ್ಥಿಗಳು ಸಾಮಾಜಿಕ ಪರಿಶೋಧನೆ ನಿರ್ವಹಣೆ ಮಾಡಿದ ಅನುಭವ (3 ವರ್ಷ), ಸ್ವಯಂ ಸೇವಾ ಸಂಸ್ಥೆ/ ಸಂಘಗಳಲ್ಲಿ ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳಲ್ಲಿ ಕಾರ್ಯ ನಿರರ್ವಹಣೆ ಮಾಡಿದ ಅನುಭವ (5 ವರ್ಷ), ನರೇಗಾ ಕಾರ್ಯಕ್ರಮದ ಅನುಭವ (2) ವರ್ಷ ಆಪೇಕ್ಷಣಿಯ. ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ (34). ಮಾಸಿಕ ವೇತನ 18,000 ರೂ.ಗಳು. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯ. ಸಾಮಾಜಿಕ ಪರಿಶೋಧನೆ ನಿರ್ವಹಣೆ ಮಾಡಿದ ಅನುಭವ (2 ವರ್ಷ), ಸ್ವಯಂ ಸೇವಾ ಸಂಸ್ಥೆ/ ಸಂಘಗಳಲ್ಲಿ ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳಲ್ಲಿ ಕಾರ್ಯ ನಿರರ್ವಹಣೆ ಮಾಡಿದ ಅನುಭವ (3 ವರ್ಷ), ನರೇಗಾ ಕಾರ್ಯಕ್ರಮದ ಅನುಭವ (2) ವರ್ಷದ ಅನುಭವ ಆಪೇಕ್ಷಣಿಯವಾಗಿದೆ.
ಆದ್ಯತೆ;
ಸಾಮಾಜಿಕ ಪರಿಶೋಧನಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಣೆ ಮಾಡಿದ ತಾಲೂಕು ಸಾಮಾಜಿಕ ಪರಿಶೋಧನೆ ಸಂಪನ್ಮೂಲ ವ್ಯಕ್ತಿಗಳಿಗೆ ಅನುಭವ/ ಸೇವಾ ಅವಧಿ ಆಧಾರದ ಮೇಲೆ ಆದ್ಯತೆ ನೀಡಲಾಗುತ್ತದೆ. ಹಾಲಿ ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷದ ಸಡಿಲಿಕೆ ಇರುತ್ತದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ; ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ್, ಕೊಳಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ, ನಂ 55, ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು 560020. ಸ್ವೀಕೃತವಾಗುವ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಸಮಿತಿಯು ಸಂಕ್ಷೇಪಿತ ಪಟ್ಟಿಯನ್ನು ಆಧರಿಸಿ ನಿಗದಿತ ದಿನಾಂಕದಂದು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 1:5 ಪ್ರಮಾಣದಲ್ಲಿ ಅಭ್ಯರ್ಥಿಗಳ ಸಂಕ್ಷೇಪಿತ ಪಟ್ಟಿಯನ್ನು ತಯಾರಿಸಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಾಮಾಜಿಕ ಪರಿಶೋಧನೆ ಸಂಸ್ಥೆಯಲ್ಲಿ ಮೇಲ್ಕಂಡ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಲು ಇಚ್ಛಿಸಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದಾಖೆಗಳ ಜೊತೆ ಮೊಹರಾದ ಲಕೋಟೆಯಲ್ಲಿ, ಲಕೋಟೆ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ ಸಲ್ಲಿಕೆ ಮಾಡುವುದು.
ಅರ್ಜಿಗಳನ್ನು ನಿಗದಿತ ದಿನಾಂಕ ಮತ್ತು ಸಮಯದೊಳಗೆ ಮೇಲ್ಕಂಡ ವಿಳಾಸಕ್ಕೆ ಸಲ್ಲಿಸಲು ಸೂಚನೆ ನೀಡಿದೆ. ನಂತರ ಬಂದ ಅರ್ಜಿಗಳನ್ನು ಹಾಗೂ ಅಂಚೆ ವಿಳಂಬದಿಂದ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳ ಜೊತೆ ಕೆಳಕಂಡ ದೃಢೀಕೃತ ದಾಖಲಾತಿಗಳನ್ನು ಒದಗಿಸುವುದು
* ಜನ್ಮ ದಿನಾಂಕ ಕುರಿತು ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರ
* ವಿದ್ಯಾರ್ಹತೆ ಕುರಿತು ದೃಢೀಕೃತ ದಾಖಲಾತಿ ಪತ್ರಗಳು
* ಅನುಭವ ಕುರಿತು ಪ್ರಮಾಣ ಪತ್ರ
* ಕಂಪ್ಯೂಟರ್ ಜ್ಞಾನ ಅಂಗೀಕೃತ/ದೃಢೀಕೃತ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ
ದೂರವಾಣಿ ಸಂಖ್ಯೆ 080-23460650/651
ವೆಬ್ ಸೈಟ್ www.rdpr.kar.nic.in/socialaudit.asp
Rural development and panchayat raj department Karnataka invited applications for district & taluk social exploration resource person posts. Candidates can apply till January 5, 2021.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm