ಬ್ರೇಕಿಂಗ್ ನ್ಯೂಸ್
24-12-21 03:59 pm Source: Oneindia Kannada ಉದ್ಯೋಗ
ಉತ್ತರ ಕನ್ನಡ, ಡಿ. 24; ಜಿಲ್ಲಾ ಪಂಚಾಯಿತಿ ಕಾರವಾರ, ಉತ್ತರ ಕನ್ನಡ ಎನ್. ಆರ್. ಎಲ್. ಎಂ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆದಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 29 ಕೊನೆಯ ದಿನವಾಗಿದೆ.
ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ (ಕೆ. ಎಸ್. ಆರ್. ಎಲ್. ಪಿ. ಎಸ್) ಅಡಿಯಲ್ಲಿ ಅನುಷ್ಠಾನವಾಗುತ್ತಿರುವ ಎನ್. ಆರ್. ಎಲ್. ಎಂ ಯೋಜನೆಯಡಿ ಅನುಮೋದನೆಗೊಂಡಿರುವ ಜಿಲ್ಲಾ ಮತ್ತು ತಾಲೂಕು ಮಟ್ಟದ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಿದ ಒಟ್ಟು ಅಭ್ಯರ್ಥಿಗಳಲ್ಲಿ ಖಾಲಿ ಹುದ್ದೆಗಳಿಗೆ ಅನುಗುಣವಾಗಿ 1:3 ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ;
ಜಿಲ್ಲಾ ಮಟ್ಟದಲ್ಲಿ ಡಿಎಂಐಎಸ್ ಅಸಿಸ್ಟೆಂಟ್ (1 ಹುದ್ದೆ). ಅರ್ಜಿ ಸಲ್ಲಿಸುವವರು ಪೂರ್ಣಕಾಲಿಕ ಪದವೀಧರರಾಗಿದ್ದು, ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವ. ವಯೋಮಿತಿ 18 ರಿಂದ 45 ವರ್ಷಗಳು. ಕನಿಷ್ಟ 3 ವರ್ಷದ ಅನುಭವ ಹೊಂದಿರಬೇಕು. ಮಾಸಿಕ ಗೌರವಧನ 20,500 ರೂ.ಗಳು.
ತಾಲೂಕು ಮಟ್ಟ;
ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ (6) ಅರ್ಜಿ ಸಲ್ಲಿಸುವವರು ಪೂರ್ಣಕಾಲಿಕ ಸ್ನಾತಕೋತ್ತರ ಪದವೀಧರರು ಅಥವ ಪಿ. ಜಿ. ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಕನಿಷ್ಟ ಅನುಭವ 5 ವರ್ಷಗಳು. ವಯೋಮತಿ 18-45 ವರ್ಷಗಳು. ಮಾಸಿಕ ಗೌರವ ಧನ 28,000 ರೂ.ಗಳು. ಕ್ಲಸ್ಟರ್ ಸೂಪರ್ ವೈಸರ್ (2) ಹುದ್ದೆಗಳು. ಅರ್ಜಿ ಸಲ್ಲಿಸುವವರು ಪೂರ್ಣಕಾಲಿಕ ಪದವೀಧರರಾಗಿದ್ದು, ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಓದಲು, ಬರೆಯಲು ಮತ್ತು ಮಾತನಾಡಲು ಅರ್ಹರಾಗಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಕನಿಷ್ಠ 2 ವರ್ಷದ ಅನುಭವ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷ. ಮಾಸಿಕ ಗೌರವಧನ 18,000 ರೂ.ಗಳು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು https://jobsksrlps.karnataka.gov.in ವೆಬ್ ಸೈಟ್‌ನಲ್ಲಿ ತಮ್ಮ ಹೆಸರು, ಇ-ಮೇಲ್ ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇರುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಂ. ಕೆ. ಬೆಳವಡಿ, ಹುಬ್ಬಳ್ಳಿ ಹಾಗೂ ಯೋಜನಾ ನಿರ್ದೇಶಕರು, ಡಿ. ಆರ್. ಡಿ. ಎ ಕೋಶ, ಜಿಲ್ಲಾ ಪಂಚಾಯತ್, ಕಾರವಾರ, ಉತ್ತರ ಕನ್ನಡ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 9844189807.
ಧಾರವಾಡದಲ್ಲಿ ಕೆಲಸ ಖಾಲಿ ಇದೆ;
ಧಾರವಾಡ ಕೃಷಿ ಮಹಾವಿದ್ಯಾಲಯದ ಜೀವ ರಸಾಯನಶಾಸ್ತ್ರ ವಿಭಾಗದಲ್ಲಿ ಪದವೀಧರ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ತಾತ್ಕಾಲಿಕವಾಗಿ 179 ದಿನಗಳ ಅವಧಿಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಂ.ಎಸ್‍ಸಿ (ಅಗ್ರಿ) ಸಸ್ಯ ಜೀವರಸಾಯಶಾಸ್ತ್ರ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಹ, ಅನುಭವಿ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಗಳೊಂದಿಗೆ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳ ಎರಡು ಪ್ರತಿಗಳೊಂದಿಗೆ ಜನವರಿ 3, 2022 ರಂದು ಬೆಳಗ್ಗೆ 11 ಗಂಟೆಗೆ ಧಾರವಾಡ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಕಛೇರಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Karnataka State Rural Livelihood Promotion Society invited applications for the 9 post. Candidates should work on Uttara Kannada. December 29 last date to apply through online.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm