ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.
ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm