ಬ್ರೇಕಿಂಗ್ ನ್ಯೂಸ್
24-05-22 12:27 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಷ್ಟರಲ್ಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಈ ಬಾರಿ ಮೇಲ್ಮನೆ ಪ್ರವೇಶ ಮಾಡಲಿದ್ದಾರೆಂದು ಭಾರೀ ನಿರೀಕ್ಷೆ ಮೂಡಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಟಿಕೆಟ್ ನಿರಾಕರಿಸಲಾಗಿದೆ.
ಲಿಂಗಾಯತ ಕೋಟಾದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಮತ್ತೊಂದು ಅವಧಿಗೆ ಟಿಕೆಟ್ ನೀಡಲಾಗಿದೆ. ಎಸ್ಸಿ ಕೋಟಾದಡಿ ಎಸ್ಸಿ ಮೋರ್ಚಾ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ್ ಹಾಗೂ ಕೇಶವಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಗಾಗಿ ಜೂನ್ 3ರಂದು ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿಗೆ ನಾಲ್ಕು ಸ್ಥಾನಗಳನ್ನು ಗೆಲ್ಲುವ ಅವಕಾಶ ಇದೆ. ಈ ನಾಲ್ಕು ಸ್ಥಾನಗಳಿಗೆ ಭಾರೀ ಪೈಪೋಟಿ ಉಂಟಾಗಿತ್ತು.
ಮಾಜಿ ಸಿಎಂ ಬಿಎಸ್ವೈ ಪುತ್ರ ವಿಜಯೇಂದ್ರ ಈ ಬಾರಿ ಪರಿಷತ್ ಪ್ರವೇಶಿಸಿ, ಸಚಿವರಾಗಲಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ ವಿಜಯೇಂದ್ರ ಸೇರಿದಂತೆ ಹತ್ತಕ್ಕೂ ಹೆಚ್ಚು ಹೆಸರುಗಳನ್ನು ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ನಾಮಪತ್ರ ಸಲ್ಲಿಕೆಗೆ ಮೇ 24ರ ಮಂಗಳವಾರ ಅಂತಿಮ ದಿನವಾಗಿದ್ದು, ಇಂದು ಮಧ್ಯಾಹ್ನ 3 ಗಂಟೆ ಮೊದಲು ನಾಮಪತ್ರ ಸಲ್ಲಿಕೆಯಾಗಬೇಕಿದೆ.
ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಅವರಿಗೆ ಟಿಕೆಟ್ ನಿರಾಕರಿಸಿದ್ದು ನಾನಾ ಊಹಪೋಹಗಳಿಗೆ ದಾರಿ ಮಾಡಿಕೊಟ್ಟಿದೆ. ಟಿಕೆಟ್ ನೀಡಲು ಕೇಂದ್ರ ನಾಯಕರು ಒಲವು ಹೊಂದಿದ್ದರಾದರೂ, ಚುನಾವಣೆ ಕಾಲದಲ್ಲಿ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣಕ್ಕೆ ಒತ್ತು ನೀಡಿದಂತಾಗುತ್ತದೆ ಎಂದು ಕೆಲವು ನಾಯಕರು ಆಕ್ಷೇಪಿಸಿದ್ದರಿಂದ ಸದ್ಯಕ್ಕೆ ಟಿಕೆಟ್ ಘೋಷಿಸಿಲ್ಲ ಎನ್ನಲಾಗುತ್ತಿದೆ. ಆಮೂಲಕ ಮಾಜಿ ಸಿಎಂ ಯಡಿಯೂರಪ್ಪ ಬಣಕ್ಕೆ ಶಾಕ್ ನೀಡಿದಂತಾಗಿದೆ. ಬಿ.ಎಲ್. ಸಂತೋಷ್ ಮತ್ತು ಯಡಿಯೂರಪ್ಪ ಬಣದ ಶೀತಲ ಸಮರಕ್ಕೆ ಮತ್ತೆ ತುಪ್ಪ ಬಿದ್ದಿದೆ.
ಇದೇ ವೇಳೆ, ಜೂನ್ 13ರಂದು ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಆಯ್ಕೆಗೆ ಚುನಾವಣೆಯೂ ನಡೆಯುತ್ತಿದ್ದು ಕೇಂದ್ರ ನಾಯಕರು ಅಭ್ಯರ್ಥಿ ಘೋಷಿಸುವ ಮೊದಲೇ ಬೆಳಗಾವಿ, ಹುಬ್ಬಳ್ಳಿ, ಮೈಸೂರು ಭಾಗದಲ್ಲಿ ಕೆಲವು ಅಭ್ಯರ್ಥಿಗಳು ತಾವಾಗೇ ನಾಮಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದ ಬಸವರಾಜ ಹೊರಟ್ಟಿ ಹುಬ್ಬಳ್ಳಿ ಮತ್ತು ಬೆಳಗಾವಿ ಕ್ಷೇತ್ರದಲ್ಲಿ ಅರುಣ ಶಹಾಪುರ ನಾಮಪತ್ರ ಸಲ್ಲಿಸಿದ್ದಾರೆ.
The BJP national leadership on Tuesday announced candidates for the upcoming June 3 Legislative Council elections. The announcement of the list came as a setback to former CM B S Yediyurappa as the party national leadership refused to field his second son B Y Vijayendra - who is vice president of the BJP state unit - as a candidate for the MLC elections.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm