ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​​ಗೆ ಕೊರೊನಾ ಪಾಸಿಟಿವ್

27-09-20 11:51 am       Headline Karnataka News Network   ಕರ್ನಾಟಕ

ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು, ಸೆಪ್ಟಂಬರ್ 27: ಕಾಂಗ್ರೆಸ್​ ಕಾರ್ಯಕಾರಿಣಿ ಸಮಿತಿ ಸದಸ್ಯ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ದಿನೇಶ್​ ಗುಂಡೂರಾವ್ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ.

ಕೋವಿಡ್ ಟೆಸ್ಟ್​​ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.

Join our WhatsApp group for latest news updates (2)