ಬ್ರೇಕಿಂಗ್ ನ್ಯೂಸ್
27-05-22 10:16 am Bengalore Correspondent ಕರ್ನಾಟಕ
ಬೆಂಗಳೂರು, ಮೆ 27: ಜಾರಿ ನಿರ್ದೇಶನಾಲಯ (Enforcement directorate) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಗುರುವಾರ ಆರೋಪಪಟ್ಟಿ ದಾಖಲಿಸಿದೆ. ಈ ಮೂಲಕ ಇಡಿ ಮತ್ತೊಮ್ಮೆ ಡಿ ಕೆ ಶಿವಕುಮಾರ್ ಗೆ ಶಾಕ್ ಕೊಟ್ಟಿದೆ.
ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಇದ್ದಾರೆ.
2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. 50 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿದ್ದು ನಂತರ ದೆಹಲಿ ಹೈಕೋರ್ಟ್ ನಿಂದ ಜಾಮೀನು ಮೇಲೆ ಹೊರಬಂದಿದ್ದರು.
ಈ ಬಾರಿ ಜಾರಿ ನಿರ್ದೇಶನಾಲಯದಿಂದ ಡಿ ಕೆ ಶಿವಕುಮಾರ್ ಗೆ ಶಿಕ್ಷೆಯಾಗುತ್ತದೆಯೇ, ಆದರೆ ಎಷ್ಟು ವರ್ಷ ಆಗುತ್ತದೆ, ಅವರ ರಾಜಕೀಯ ಜೀವನಕ್ಕೆ ಮುಳುವಾಗುತ್ತದೆಯೇ ಎಂಬುದು ಸದ್ಯಕ್ಕಿರುವ ಕುತೂಹಲ.
ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ, ಒಪ್ಪದಿದ್ದಕ್ಕೆ ಸಂಚು: ಡಿಕೆ ಶಿವಕುಮಾರ್ ನೇರ ಆರೋಪ
ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಇದಕ್ಕೆ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ.
— DK Shivakumar (@DKShivakumar) May 26, 2022
The Enforcement Directorate (ED) has filed a chargesheet under the Prevention of Money-Laundering Act against Congress's Karnataka unit president DK shivakumar before a special court here this week. The agency has, however, not shared details of the charges framed against the former minister.
Shivakumar was arrested in September 2019 after being grilled on huge investments flowing into his entities which owned properties in Karnataka and Delhi.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
06-02-25 02:21 pm
HK News Desk
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 12:00 pm
HK News Desk
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm