ಬ್ರೇಕಿಂಗ್ ನ್ಯೂಸ್
30-05-22 10:11 am HK News Desk ಕರ್ನಾಟಕ
ಕಲಬುರ್ಗಿ, ಮೇ 30 : ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ದೈಹಿಕ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಅನುಮಾನ ಕೇಳಿಬಂದಿದ್ದು, ಸಿಐಡಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.
ಪಿಎಸ್‌ಐ ನೇಮಕಾತಿ ಹಗರಣದ ಎರಡನೇ ಹಂತದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆ ಕೆಲಸದಾತ ಪ್ರಕಾಶ ಕಲ್ಲೂರ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 33ಕ್ಕೆ ಏರಿದಂತಾಗಿದೆ.

ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಹಾಗೂ ಒಎಂಆರ್ ಶೀಟ್ ತಿದ್ದುಪಡಿ ಮೂಲಕ ಅಕ್ರಮ ಎಸಗಿದ್ದರೆ, ಕೆಲವು ಅಭ್ಯರ್ಥಿಗಳನ್ನು ಶಾರೀರಿಕ ಅರ್ಹತೆ ಇಲ್ಲದಿದ್ದರೂ ದೈಹಿಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಪಾಸ್ ಮಾಡಿರುವ ಕುರಿತಾಗಿ ಆರೋಪ ಕೇಳಿಬಂದಿದೆ.
ಈ ಬಗ್ಗೆ ತನಿಖೆ ಕೈಗೊಂಡಲ್ಲಿ ಅಕ್ರಮ ಬಯಲಿಗೆ ಬರುವ ಸಾಧ್ಯತೆಯಿದೆ. ಅಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿರುವ ಶಂಕೆಯಿದೆ. ಕಳೆದ ನಾಲ್ಕು ದಿನಗಳಿಂದ ಸಿಐಡಿ ಪೊಲೀಸರು ಈ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದು, ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಬಂಧನಕ್ಕೆ ಮುಂದಾಗಲಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷಾ ಅಕ್ರಮ ಸಂಬಂಧಿಸಿ ಈವರೆಗೆ 33 ಜನರ ಬಂಧನವಾಗಿದ್ದರೆ ದೈಹಿಕ ಪರೀಕ್ಷೆಯಲ್ಲಿ ಇನ್ನೂ 20 ಜನರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬರುತ್ತಿದೆ.
Kalaburgi PSI Exam Scam, Fraud physical test, higher police officer involved. CID officials are now investigating the case.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm