ಬ್ರೇಕಿಂಗ್ ನ್ಯೂಸ್
30-05-22 05:12 pm HK News Desk ಕರ್ನಾಟಕ
ಬಾಗಲಕೋಟೆ, ಮೇ 30: ಮುಸ್ಲಿಂ ಹುಡುಗನೊಬ್ಬ ಮದ್ರಸಕ್ಕೆ ಹಾಕ್ಕೊಂಡು ಹೋಗುವ ಬಿಳಿ ಟೋಪಿಯನ್ನು ಧರಿಸಿ ಕಾಲೇಜಿಗೆ ಬಂದ ಕಾರಣಕ್ಕೆ ಪ್ರಾಂಶುಪಾಲ ಸೇರಿ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಘಟನೆ ಬಗ್ಗೆ ಕೋರ್ಟ್ ಆದೇಶದನ್ವಯ ಅಲ್ಲಿನ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಗಣಿ ಪಿ.ಹೆಚ್, ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್.ಬಿ.ಕಲಾಟೆ, ಎಸ್.ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ವಿರುದ್ಧ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 18ರಂದು ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ತಲೆಎತ್ತಿದ್ದಾಗ ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿ ನವೀದ್ ಥರಥರಿ ಎಂಬಾತ ಕಾಲೇಜಿಗೆ ಬಿಳಿ ಟೋಪಿ ಧರಿಸಿ ಬಂದಿದ್ದು ಕಾಲೇಜಿನ ಪ್ರಿನ್ಸಿಪಾಲ್ ವಿರೋಧಿಸಿದ್ದರು. ಬಳಿಕ ತೇರದಾಳ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರ ಹಾಕಿಸಿದ್ದರು. ಆದರೆ ತನ್ನ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ, ಘಟನೆಗೆ ಸಂಬಂಧಿಸಿ ಬನಹಟ್ಟಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಖಾಸಗಿ ರಿಟ್ ಹಾಕಿ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದ. ಪೊಲೀಸರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರ ಮೂಲಕ ಒತ್ತಾಯಿಸಿದ್ದ. ಇದೀಗ ಕೋರ್ಟ್ ಅದೇ ತೇರದಾಳ ಠಾಣೆಯಲ್ಲಿ ಅಲ್ಲಿನದ್ದೇ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ಮೇಲಧಿಕಾರಿಯಿಂದ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದೆ.
An FIR has been lodged against seven people, including principal, sub inspectors and five others in connection with alleged thrashing of a student for wearing a skull cap on the premises of a college in Karnataka, police said on Sunday (May 29).
23-09-26 09:28 am
HK News Staffer
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
23-09-26 09:30 am
HK News Staffer
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
23-09-26 09:32 am
HK News Staffer
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm