ಬ್ರೇಕಿಂಗ್ ನ್ಯೂಸ್
31-05-22 12:05 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ಮುಂಗೈ ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದ ತೇಜಸ್ವಿನಿ (21) ಮೃತ ಯುವತಿ. ಬೆಂಗಳೂರಿನಲ್ಲಿ ಪಿಜಿಯಲ್ಲಿದ್ದುಕೊಂಡು ಇಂಜಿನಿಯರಿಂಗ್ ಓದುತ್ತಿದ್ದ ತೇಜಸ್ವಿನಿ ಭಾನುವಾರ ಬಾತ್ ರೂಮಿನಲ್ಲಿ ಬಿದ್ದು ಗಾಯಗೊಂಡಿದ್ದಳು. ಮುಂಗೈಗೆ ಪೆಟ್ಟಾಗಿದ್ದರಿಂದ ಶಸ್ತ್ರಚಿಕಿತ್ಸೆಗಾಗಿ ಮಾರತ್ ಹಳ್ಳಿಯ ಜೀವಿಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಶಸ್ತ್ರಚಿಕಿತ್ಸೆಯಾದ ಕೆಲವೇ ಗಂಟೆಗಳಲ್ಲಿ ಯುವತಿ ಮೃತಪಟ್ಟಿದ್ದು ಆಸ್ಪತ್ರೆ ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಬಂಧನಕ್ಕಾಗಿ ಗೇಟ್ ನಲ್ಲಿ ಕುಳಿತು ಧರಣಿ ನಡೆಸಿದ ಬಳಿಕ ಎಚ್ಎಎಲ್ ಠಾಣೆ ಪೊಲೀಸರು ವೈದ್ಯರ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಸಂಬಂಧ ಹೆಚ್ಎಎಲ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜೀವಿಕಾ ಆಸ್ಪತ್ರೆಯ ವೈದ್ಯ ಶಶಾಂಕ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿಯಿದೆ.
In an incident that reportedly occurred at Maarathahalli, an engineering student who had severely injured a hand in a fall underwent surgery and died a few hours after the procedure. The parents of the deceased young woman have accused doctors of medical negligence and claimed that to be the cause of their daughter’s death. The deceased student has been identified as Bagepalli resident Tejasvini (21), it is learned.
23-09-26 09:28 am
HK News Staffer
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
23-09-26 09:30 am
HK News Staffer
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
23-09-26 09:32 am
HK News Staffer
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm