ಬ್ರೇಕಿಂಗ್ ನ್ಯೂಸ್
03-06-22 11:32 am HK News Desk ಕರ್ನಾಟಕ
ಕಲಬುರಗಿ, ಜೂನ್ 3 : ಖಾಸಗಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು ಬೆಂಕಿಗಾಹುತಿಯಾಗಿದ್ದು ಇಬ್ಬರು ಮಕ್ಕಳು ಸೇರಿ ಏಳು ಜನ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಸುಕಿನ ಜಾವ ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ. ಅಡ್ಡಲಾಗಿ ಬಿದ್ದ ಬಸ್ಸಿನಲ್ಲಿ ನಿದ್ದೆಯ ಮಂಪರಿನಲ್ಲಿದ್ದವರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಬೆಂಕಿ ಉಂಟಾಗಿತ್ತು.

ತೆಲಂಗಾಣದ ಹೈದರಬಾದ್‌ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸ ತೆರಳಿದ್ದರು. ಅಲ್ಲಿಂದ ಗುರುವಾರ ರಾತ್ರಿ ಹೊರಟಿದ್ದು ಕಲಬುರಗಿ ಮೂಲಕ ಹೈದರಾಬಾದ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 22 ಮಂದಿ ಬಸ್ಸಿನಿಂದ ಹೊರ ಬಂದಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ದಂಪತಿ ಸೇರಿದ್ದಾರೆ.
ಬಸ್ ಪೂರ್ತಿಯಾಗಿ ಸುಟ್ಟು ಹೋಗಿದ್ದು ಸಂಪೂರ್ಣ ಕರಕಲಾಗಿದೆ. ಟೆಂಪೋ ಕೂಡ ಇನ್ನೊಂದು ಕಡೆಗೆ ಉರುಳಿದ್ದು ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Bus catches fire and falls into pit after tempo rams at Kalaburgi, seven killed on spot.
23-09-26 09:28 am
HK News Staffer
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 09:32 am
HK News Staffer
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm