ಬೆಂಗಳೂರು ಏರ್ಪೋರ್ಟ್ ನಲ್ಲಿ ಸಿದ್ದರಾಮಯ್ಯ- ಯಡಿಯೂರಪ್ಪ ಮಾತುಕತೆ ; ರಾಜಕೀಯ ಕುತೂಹಲ  

06-06-22 07:42 pm       Bengalore Correspondent   ಕರ್ನಾಟಕ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು ಏರ್ಪೋರ್ಟ್ ನಲ್ಲಿ ಎದುರಾಗಿದ್ದ ವೇಳೆ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.

ಬೆಂಗಳೂರು, ಜೂನ್ 6 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು ಏರ್ಪೋರ್ಟ್ ನಲ್ಲಿ ಎದುರಾಗಿದ್ದ ವೇಳೆ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.

ಹಿಂದೆ ಹಾವು ಮುಂಗುಸಿಯಂತಿದ್ದ ಇಬ್ಬರು ನಾಯಕರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಐಪಿ ಲಾಂಜ್ ನಲ್ಲಿ ಕುಳಿತು ಕೆಲಕಾಲ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಸೈಡ್ ಲೈನ್ ಮಾಡಲಾಗುತ್ತಿದೆ ಅನ್ನುವ ಆರೋಪದ ನಡುವಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಮಾತುಕತೆ ನಡೆಸಿದ್ದು ಚರ್ಚೆಗೂ ಕಾರಣವಾಗಿದೆ.

ಯಡಿಯೂರಪ್ಪ ಬೆಂಗಳೂರಿನಿಂದ ಬೆಳಗಾವಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದೇ ವೇಳೆ, ಸಿದ್ದರಾಮಯ್ಯ ಕೂಡ ಹುಬ್ಬಳ್ಳಿಗೆ ತೆರಳುವುದಕ್ಕಾಗಿ ಬೆಂಗಳೂರು ಏರ್ಪೋರ್ಟ್ ಆಗಮಿಸಿದ್ದರು. ಈ ವೇಳೆ, ಮಾಜಿ ಮುಖ್ಯಮಂತ್ರಿಗಳಿಬ್ಬರು ವಿಐಪಿ ಲಾಂಜ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಬ್ಬರು ದಿಗ್ಗಜರ ಭೇಟಿ ಕುತೂಹಲ ಮೂಡಿಸಿದೆ.

Former Chief Minister BS Yediyurappa met Leader of Opposition Siddaramaiah at the Kempegowda International airport on Monday, June 6. The leaders who were on their way to Belagavi had a brief meeting at the airport lounge.