ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದಲೂ ರೋಹಿತ್ ಚಕ್ರತೀರ್ಥ ಹೊರಕ್ಕೆ ; ದೃಢಪಡಿಸಿದ ಶಿಕ್ಷಣ ಸಚಿವ 

07-06-22 04:06 pm       Bengalore Correspondent   ಕರ್ನಾಟಕ

ಪಠ್ಯಪುಸ್ತಕದ ಬಗ್ಗೆ ಆಕ್ರೋಶ, ವಿವಾದ ಎದ್ದಿರುವ ಹಿನ್ನೆಲೆಯಲ್ಲಿ ರೋಹಿತ್ ಚಕ್ರತೀರ್ಥ ಅವರನ್ನು ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದಲೂ ಶಿಕ್ಷಣ ಇಲಾಖೆ ಕೈಬಿಟ್ಟಿದೆ. 

ಬೆಂಗಳೂರು, ಜೂನ್ 7 : ಪಠ್ಯಪುಸ್ತಕದ ಬಗ್ಗೆ ಆಕ್ರೋಶ, ವಿವಾದ ಎದ್ದಿರುವ ಹಿನ್ನೆಲೆಯಲ್ಲಿ ರೋಹಿತ್ ಚಕ್ರತೀರ್ಥ ಅವರನ್ನು ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದಲೂ ಶಿಕ್ಷಣ ಇಲಾಖೆ ಕೈಬಿಟ್ಟಿದೆ. 

ಪಿಯುಸಿ ಪಠ್ಯ ಪರಿಷ್ಕರಣೆಗೂ ರೋಹಿತ್ ಚಕ್ರತೀರ್ಥ ಅವರನ್ನೇ ರಾಜ್ಯ ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿದ್ದರಿಂದ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ. ರೋಹಿತ ಚಕ್ರತೀರ್ಥ ಅವರನ್ನು ಕೈಬಿಟ್ಟಿರುವ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

Can't encourage religious slogans on campus: B C Nagesh | Deccan Herald

ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆಗೆ ಸರ್ಕಾರ ಮುಂದಾಗಿತ್ತು. ಇದರ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮುಂದಾಗಿದ್ದಾರೆ. ರೋಹಿತ್ ಚಕ್ರತೀರ್ಥ ನೇತೃತ್ವದ ಶಾಲಾ ಪಠ್ಯ ಪುಸ್ತಕ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

Karnataka: मुख्यमंत्री बसवराज बोम्मई ने कहा- कोई भी पद स्थाई नहीं, सीएम पद  से हटने की लगने लगीं अटकलें | TV9 Bharatvarsh

ಹಿಂದುತ್ವ ಪರ ಸಂಘಟನೆಗಳು ಮತ್ತು ಬಲಪಂಥೀಯ ಲೇಖಕನಾಗಿ ಗುರುತಿಸಿಕೊಂಡಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ವಿಸರ್ಜಿಸಿದ್ದರು. ಪಠ್ಯ ಪರಿಷ್ಕರಣೆಯ ಕ್ರಮಗಳ ಬಗ್ಗೆ ಎದ್ದಿರುವ ವಿವಾದಗಳ ಕಾರಣಕ್ಕೆ ಅಥವಾ ಯಾವುದೇ ಒತ್ತಡಕ್ಕೆ ಮಣಿದು ಈ ಸಮಿತಿಯನ್ನು ವಿಸರ್ಜಿಸುತ್ತಿಲ್ಲ ಎಂಬ ಸೂಚನೆಯನ್ನೂ ಪತ್ರಿಕಾ ಪ್ರಕಟಣೆಯಲ್ಲಿ ಮುಖ್ಯಮಂತ್ರಿ ನೀಡಿದ್ದರು. 'ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ' ಎಂದು ಹೇಳುವ ಮೂಲಕ ಸಮಿತಿಯನ್ನು ಸಮರ್ಥಿಸಿದ್ದರು. 

ಸರ್ಕಾರದ ಈ ಕ್ರಮದೊಂದಿಗೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ವಿವಾದವೊಂದಕ್ಕೆ ತಾತ್ಕಾಲಿಕವಾಗಿ ತೆರೆ ಬಿದ್ದಂತೆ ಆಗಿದೆ. ಆದರೆ, ಮುಖ್ಯಮಂತ್ರಿಯ ಈ ಕ್ರಮವು ಪಠ್ಯಪರಿಷ್ಕರಣೆ ವಿವಾದವನ್ನು ಸಂಪೂರ್ಣ ಶಮನ ಮಾಡಿಲ್ಲ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯ ಶಿಫಾರಸಿನ ಮೇರೆಗೆ ಆಗಿರುವ ಪಠ್ಯ ಪರಿಷ್ಕರಣೆ ತಿರಸ್ಕರಿಸಬೇಕು. ಅಂಬೇಡ್ಕರ್, ಕನ್ನಡ ಧ್ವಜ ಮತ್ತು ರಾಷ್ಟ್ರಕವಿ ಕುವೆಂಪು ಅವರಿಗೆ ಈ ಹಿಂದೆ ಅವಮಾನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ, ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಒತ್ತಾಯ ಮುಂದುವರಿಸಿದ್ದಾರೆ.

Rohit chakratirtha discarded from PUC textbook revision committee, education minister BC Nagesh. Chakrathirtha has been in the eye of a controversy for excluding writings by intellectuals, abbreviating the works of Kuvempu, and even posting a distorted version of Nadageethe.